ಮಹಿಳಾ ಕಾರ್ಯಕರ್ತೆಯರೊಂದಿಗೆ ಮೋದಿ ಸಂವಾದ

Modi conversations with women activists

04-05-2018

ಬೆಂಗಳೂರು: ದೇಶ ಈಗ ಮಹಿಳೆಯರ ಅಭಿವೃದ್ಧಿಯಿಂದ ಮುಂದೆ ಸಾಗುತ್ತಿದ್ದು, ಮಹಿಳಾ ನೇತೃತ್ವದ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ತಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಆರಂಭಿಸಿರುವ ಮಹತ್ವದ ಯೋಜನೆಗಳು ಯಶಸ್ವಿಯಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು ಬೆಳಗ್ಗೆ ಅವರು ನರೇಂದ್ರ ಮೋದಿ ಆ್ಯಪ್ ಮೂಲಕ ರಾಜ್ಯದ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತೆಯರೊಂದಿಗೆ ನೇರ ಸಂವಾದ ನಡೆಸಿದರು. ರಕ್ಷಣಾ ಸಚಿವಾಲಯ, ವಿದೇಶಾಂಗ ಸಚಿವಾಲಯ ಮೊದಲಾದ ಸರ್ಕಾರದ ಅತ್ಯುನ್ನತ ಖಾತೆಗಳನ್ನು ಸಚಿವೆಯರು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ.

ಮಹಿಳೆಯರಿಗೆ ಅವರ ಸಾಮರ್ಥ್ಯವನ್ನು ಸಾಬೀತುಪಡಿಸಲು ಉತ್ತಮ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಮಹಿಳೆಯರು ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಇತರ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ, ಪ್ರತಿಯೊಂದು ಹಂತದಲ್ಲೂ ಮಹಿಳೆಯರಿಗೆ ಬೆಂಬಲ ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಚುನಾವಣೆಗಳಲ್ಲಿ ಬೂತ್ ಮಟ್ಟದಲ್ಲಿ ಗೆಲುವು ಅತ್ಯಂತ ಮಹತ್ವದ್ದಾಗಿದ್ದು, ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ, ಬೇಟಿ ಬಚಾವೊ ಬೇಟಿ ಪಢಾವೊ ಮೊದಲಾದ ಯೋಜನೆಗಳ ಬಗ್ಗೆ ಮಹಿಳಾ ಮತದಾರರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು, ಪಕ್ಷದ ಗೆಲುವಿಗೆ ಮಹಿಳಾ ಕಾರ್ಯಕರ್ತೆಯರ ಕೊಡುಗೆ ಅಮೂಲ್ಯ ಎಂದು ಪ್ರಧಾನಮಂತ್ರಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರಿಗೆ ವಿವರಿಸಿದರು.

ಉಡುಪಿ ಮತ್ತು ಶಿವಮೊಗ್ಗದಲ್ಲಿ ಹಲವು ಮಹಿಳಾ ಸಂಘಟನೆಗಳ ಸದಸ್ಯರು ಈ ಕಾರ್ಯಕ್ರಮವನ್ನು ವೀಕ್ಷಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ರಾಜ್ಯದಲ್ಲಿ ಪ್ರಚಾರ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದು, ತುಮಕೂರು, ಗದಗ, ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ಚುನಾವಣಾ ಭಾಷಣ ಮಾಡಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Narendra Modi empowerment ಭಾಷಣ ಸಚಿವಾಲಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ