ಬಿಜೆಪಿ ಪ್ರಚಾರ ವಾಹನದ ಮೇಲೆ ಕಲ್ಲುತೂರಾಟ!

stones thrown on BJP campaign vehicle!

05-05-2018

ಬೆಳಗಾವಿ: ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದ ವಾಹನಕ್ಕೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ, ಬೆಳಗಾವಿಯ ಹುಕ್ಕೇರಿ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ನಡೆದಿದೆ.ಯಮಕನಮರಡಿ ಮೀಸಲು ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ಪರ ಟಾಟಾ ಏಸ್ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದು, ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ವಾಹನದ ಗಾಜು ಪುಡಿ ಪುಡಿ ಯಾಗಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಐಸಿಸಿ ಕಾರ್ಯದರ್ಶಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಸ್ಪರ್ಧೆ ಮಾಡುತ್ತಿರುವ ಕ್ಷೇತ್ರ ಯಮಕನಮರಡಿ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ