ಕಾಂಗ್ರೆಸ್ ಪ್ರಣಾಳಿಕೆ ಕುರಿತು ಜೋಶಿ ಟೀಕೆ

Joshi criticizes Congress manifesto

05-05-2018

ಹುಬ್ಬಳ್ಳಿ: ನಾಳೆ ಸಂಜೆ ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದರು. ನಾಳಿನ ಕಾರ್ಯಕ್ರಮದ ಬಗ್ಗೆ ವಿವರ ನೀಡಿದ ಜೋಶಿ, ರೈಲ್ವೆ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಾರೆ. ಸಮಾವೇಶದಲ್ಲಿ ಧಾರವಾಡ, ಹಾವೇರಿ ಭಾಗದ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ. ಕಾರ್ಯಕರ್ತರ, ಸಾರ್ಜಜನಿಕರ ಅನುಕೂಲಕ್ಕಾಗಿ ವಾಹನಗಳ ನಿಲುಗಡೆಗೆ ನೆಹರು ಮೈದಾನವನ್ನು ಬಾಡಿಗೆ ಪಡೆಯಲಾಗಿದೆ ಎಂದು ತಿಳಿಸಿದರು. 

ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ನಮ್ಮ ಮತದಾರರಿಗೆ ಬೆದರಿಕೆ ಹಾಕಲಾಗುತ್ತಿದೆ. ಈ ಕುರಿತು ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದ ಜೋಶಿ, ಸ್ವಾಮಿನಾಥನ್ ವರದಿ ನೆನೆಗುದಿಗೆ ಬಿದ್ದಿತ್ತು, ಅದನ್ನು ನರೇಂದ್ರ ಮೋದಿಯವರು ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಮೆಟ್ರೋ ಲಿಂಕ್ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಕಟವಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕನ್ನಡ ಸರಿಯಿಲ್ಲ, ಕನ್ನಡಕ್ಕೆ ಅವಮಾನ ಮಾಡಲಾಗಿದೆ. ವಾಕ್ಯ ರಚನೆ ಸರಿಯಾಗಿಲ್ಲ ಒಂದಕ್ಕೊಂದು ಸಂಬಂಧವೂ ಇಲ್ಲ ಎಂದು ಟೀಕಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

prahlad joshi narendra modi ಸಂಸದ ಅನುಕೂಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ