ಮಾವಿನ ತೋಟದಲ್ಲಿ 6 ಲಕ್ಷ ಮೌಲ್ಯದ ಮದ್ಯ ವಶ

6 lakh worth illegal liquor seized

07-05-2018

ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಇದ್ದು, ಮತದಾರರಿಗೆ ಹಂಚಲು ತಂದಿದ್ದ ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಕೊಪ್ಪಳದ ಕನಕಗಿರಿ ತಾಲ್ಲೂಕಿನ ಬೈಲಕ್ಕಂಪುರ ಬಳಿ ಸುಮಾರು 6 ಲಕ್ಷ ಮೌಲ್ಯದ 165 ಬಾಕ್ಸ್ ಗಳ ಒಂದು ಸಾವಿರಕ್ಕೂ ಹೆಚ್ಚು ಲೀಟರ್ ಲಿಕ್ಕರ್ ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ ಇಬ್ಬರು ಆರೋಪಿಗಳು ಮಣಿಕಂಠ, ಶರಣಪ್ಪ ಎಂಬುವರನ್ನು ಬಂಧಿಸಿದ್ದಾರೆ. ಹೊರ ರಾಜ್ಯದಿಂದ ಮತದಾರರಿಗೆ ಹಂಚಲು ತಂದಿದ್ದ ಮದ್ಯವನ್ನು ಬೈಲಕ್ಕಂಪುರದ ಬಳಿಯ ಮಾವಿನ ತೋಟದಲ್ಲಿ ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮದ್ಯದ ಬಾಕ್ಸ್ ಮೇಲೆ ಅರುಣಾಚಲ ಪ್ರದೇಶದ ಹೆಸರು ಕಂಡು ಬಂದಿದ್ದು, ಯಾವ ಪಕ್ಷದವರಿಗೆ ಸೇರಿದ್ದು ಎನ್ನುವುದು ತಿಳಿದು ಬಂದಿಲ್ಲ. ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

liquor seize ಅಬಕಾರಿ ಮಾಹಿತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ