ಜಿಲ್ಲಾಧಿಕಾರಿ ಕಚೇರಿ ಎದುರು ಜೆಡಿಎಸ್ ಅಭ್ಯರ್ಥಿ ಧರಣಿ

JD (S) candidate protest in front of Deputy Commissioner

07-05-2018

ವಿಜಯಪುರ: ಚುನಾವಣಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜೆಡಿಎಸ್ ಅಭ್ಯರ್ಥಿ ಧರಣಿ ನಡೆಸಿದ್ದಾರೆ. ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಮನಗೂಳಿ, ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ್ದಾರೆ. ಸಿಂದಗಿ ಚುನಾವಣಾಧಿಕಾರಿಯಾದ ಚನ್ನಬಸಪ್ಪ ಕೊಡ್ಲಿ ಅವರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿದ್ದಾರೆ. ಸಿಂದಗಿ ಮತಕ್ಷೇತ್ರದ ಮಾದರಿ ಮತಪತ್ರದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ಗೋಲ್ ಮಾಲ್ ಮಾಡಿರುವ ಆರೋಪ ಮಾಡಿದ್ದಾರೆ. ಮಾದರಿ ಪತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯ ಅನುಕ್ರಮ ಸಂಖ್ಯೆ, ಹೆಸರು ಮತ್ತು ಚಿನ್ಹೆ ಅದಲು ಬದಲು ಮಾಡಿರುವ ಬಗ್ಗೆ ಸಿಂದಗಿ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ವಿರುದ್ಧ ಆರೋಪಿಸಿದ್ದು, ಈ ಹಿನ್ನೆಲೆ ಸಿಂದಗಿ ಚುನಾವಣಾಧಿಕಾರಿ ಬದಲಾವಣೆಗೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

election officer prtest ಶಾಸಕ ರಮೇಶ ಭೂಸನೂರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ