ಬಿಜೆಪಿ ಅಧಿಕಾರಕ್ಕೆ ಶತಸಿದ್ಧ -ಯಡಿಯೂರಪ್ಪ07-05-2018

ಬೆಂಗಳೂರು: ವಿಜಯಪುರದಲ್ಲಿ‌ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಚುನಾವಣೆಯಲ್ಲಿ ನಾವು ಗೆಲ್ಲುವುದು ಶತಸಿದ್ಧ. ಮಾಧ್ಯಮಗಳಲ್ಲಿ‌ ಬಂದಿರುವ ಸಮೀಕ್ಷೆ ಸುಳ್ಳಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಾದಂತೆ ಕರ್ನಾಟಕದಲ್ಲೂ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ‘ನಾನು‌ ಅಧಿಕಾರಕ್ಕೆ ಬಂದ ದಿನವೇ ರಾಷ್ಟ್ರೀಕೃತ ಬ್ಯಾಂಕಗಳ ಸಾಲ ಮನ್ನಾ ಘೋಷಣೆ ಮಾಡುತ್ತೇನೆ’ ಎಂದು ಯಡಿಯೂರಪ್ಪ ತಿಳಿಸಿದರು. ಮೇ 17ನೇ ತಾರಿಖು ‘ನಾನು ಪ್ರಮಾಣ ವಚನ ಸ್ವೀಕರಿಸುವುದು ನಿಶ್ಚಿತ’. ಮೊದಲ‌ ಸಚಿವ ಸಂಪುಟ ಸಭೆಯಲ್ಲೇ ಸಾಲ ಮನ್ನಾ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗಾಗಿ ಎಸಿಬಿ ರದ್ದು ಮಾಡುತ್ತೇನೆ ಎಂದು ಘೋಷಿಸಿದರು.

ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡುತ್ತೇನೆ. ಕಾಮಗಾರಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ ಮಾಡುತ್ತೇನೆ. 'ನಾನು ಬಿಡುಗಡೆ ಮಾಡಿರುವುದು ಪ್ರಣಾಳಿಕೆ ಅಲ್ಲ, ಅದು ಸರ್ಕಾರದ ಗೆಜೆಟ್' ಎಂದು ಸ್ಪಷ್ಟಪಡಿಸಿದರು. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕೈಗೊಳ್ಳುವ ಕಾರ್ಯಕ್ರಮಗಳು ಇದರಲ್ಲಿವೆ. ಉಚಿತ ಶಿಕ್ಷಣ, ತಾಳಿ‌ ಭಾಗ್ಯ ಯೋಜನೆ ಜಾರಿಗೆ ತರಲಾಗುವುದು. ಭಾಗ್ಯಲಕ್ಷಿ ಯೋಜನೆಯ ಹಣವನ್ನು ಹೆಚ್ಚಿಗೆ ಮಾಡಲಾಗುವುದು ಎಂದು ಹೇಳಿದರು. ಜೆಡಿಎಸ್ ಪಕ್ಷ 20ಕ್ಕಿಂತ ಹೆಚ್ಚಿನ ಸ್ಥಾನ ಗೆಲ್ಲುವುದಿಲ್ಲ. ನಮಗೆ ಅವರ ಬೆಂಬಲ‌ ಬೇಕಿಲ್ಲ, ನಾವೇ 150 ಸ್ಥಾನಗಳನ್ನು ಗೆಲ್ಲುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು. ಚುನಾವಣಾ ಪ್ರಚಾರದಲ್ಲಿ ಪ್ರಧಾನಿ‌ ಮೋದಿ ಈ ವಿಚಾರ ಪಸ್ತಾಪ ಮಾಡಿದ್ದು ಸಂತಸ ತಂದಿದೆ. ಶೀಘ್ರವೇ ,ಈ ವಿಚಾರ ಬಗೆಹರಿಯಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

B.S.Yeddyurappa ACB ಗೆಜೆಟ್ ತಾಳಿ‌ ಭಾಗ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ