ಬಸ್ಸಲ್ಲಿ ಸಾಗಿಸುತ್ತಿದ್ದ 2.98 ಕೋಟಿ ನಗದು ವಶ

Tumkur:2.98 crore cash seized in bus

07-05-2018

ತುಮಕೂರು: ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 2.98 ಕೋಟಿ ನಗದನ್ನು ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ಗಜಾನನ ಮೋಟರ್ ಟ್ರಾನ್ಸ್ ಪೋರ್ಟ್ ಎಂಬ ಖಾಸಗಿ ಬಸ್ ನಲ್ಲಿ ಹಣ ಪತ್ತೆಯಾಗಿದೆ. ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಮಾಹಿತಿ ಮೇರೆಗೆ ಮಧ್ಯರಾತ್ರಿ 1.30 ಸುಮಾರಿನಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಸ್ಸಲ್ಲಿ ದಾಖಲೆ ಇಲ್ಲದ ಅಕ್ರಮವಾಗಿ ಸಾಗಿಸುತ್ತಿದ್ದ 2.98 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

illegal money Bus ಮಾಹಿತಿ ಆರೋಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ