ಮಂಗಳೂರು: 201 ಸೂಕ್ಷ್ಮ ಮತಗಟ್ಟೆಗಳು

Mangalore: 201 sensitive polling stations

08-05-2018

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಚುನಾವಣೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ತಿಳಿಸಿದ್ದಾರೆ. ಒಟ್ಟು 877 ಮತಗಟ್ಟೆಗಳ ಪೈಕಿ 201 ಸೂಕ್ಷ್ಮ ಮತಗಟ್ಟೆಗಳಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 11 ಸಿ.ಆರ್.ಪಿ.ಎಫ್ ತುಕಡಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ ಒಟ್ಟು 2700 ಮಂದಿಯನ್ನು ಭದ್ರತೆಗೆ ನೇಮಕ ಮಾಡಲಾಗಿದೆ ಎಂದರು. 2756 ರೌಡಿ ಶೀಟರ್ ಗಳ ಮೇಲೆ ಕಣ್ಣಿಡಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ. ಶಾಂತಿ‌ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ