‘ಕೇಂದ್ರ ಸರ್ಕಾರದಿಂದ ಐಟಿ ದುರ್ಬಳಕೆ’- ಗುಂಡೂರಾವ್08-05-2018

ಬೆಂಗಳೂರು: ಐಟಿ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಐಟಿ ಮತ್ತು ಇಡಿಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ದೇಶದ ಇತಿಹಾಸದಲ್ಲಿ ಎಂದೂ ಐಟಿ ಈ ಮಟ್ಟಕ್ಕೆ ದುರ್ಬಳಕೆಯಾಗಿಲ್ಲ. ಈ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಚುನಾವಣೆ ಇದೆ ಅಂತ ಈ ರೀತಿಯಲ್ಲಿ ಐಟಿ ದಾಳಿ ನಡೆಯುತ್ತಿವೆ. ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ನೀಡಿದರೂ ಚುನಾವಣಾ ಆಯೋಗ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕೇವಲ ಕಾಂಗ್ರೆಸ್ ನಾಯಕರ, ಅಭ್ಯರ್ಥಿಗಳ ಮೇಲೆ ಯಾಕೆ ದಾಳಿ ಮಾಡ್ತೀರಿ? ಐಟಿ ಇಲಾಖೆ ಬಿಜೆಪಿ ಮೋರ್ಚಾ ತರ ಕೆಲಸ ಮಾಡುತ್ತಿದೆ. ಐಟಿ ಇಲಾಖೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮೋದಿ, ಅಮಿತ್ ಷಾ ತುಂಬಾನೇ ಕೀಳುಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದರು.

ನಮ್ಮ ಅಭ್ಯರ್ಥಿಗಳಿಗೆ ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ದೇಶದ ಇತಿಹಾಸದಲ್ಲಿ ಯಾವತ್ತು ಈ ಥರ ಆಗಿಲ್ಲ. ಮೋದಿ ಹತಾಶರಾಗಿ ಹೀಗೆ ಮಾಡುತ್ತಿದ್ದಾರೆ. ಈಗಲಾದರೂ ಚುನಾವಣಾ ಆಯೋಗ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಂತಹ ಅಧಿಕಾರಿಗಳನ್ನು ಕೂಡಲೇ ತೆಗೆದುಹಾಕಬೇಕು. ಅಕ್ರಮ ಐಟಿ ಅಧಿಕಾರಿಗಳನ್ನು ವಜಾಗೊಳಿಸುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಕೊಡುತ್ತೇವೆ ಎಂದರು.


ಸಂಬಂಧಿತ ಟ್ಯಾಗ್ಗಳು

dinesh gundu rao amit shah ಕೇಂದ್ರ ಸರ್ಕಾರ ಇಲಾಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ