‘ಮೋದಿ ಯುವಕರಿಗೆ ಅನ್ಯಾಯ ಮಾಡಿದ್ದಾರೆ’-ರಾಹುಲ್08-05-2018

ಬೆಂಗಳೂರು: ಮುಂಬರುವ 2019ರ ಲೋಕಸಭೆ ಚುನಾವಣೆ ನಂತರ ನರೇಂದ್ರ ಮೋದಿ ಮತ್ತೊಮ್ಮೆ, ದೇಶದ ಪ್ರಧಾನಿಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದಿಲ್ಲಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿಂದು 'ಸಮೃದ್ದ ಭಾರತ' ಸಂವಾದ ಕಾರ್ಯಕ್ರಮದಲ್ಲಿ ಅವರು, ಮುಂದಿನ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ. ಆದರೆ ಬಿಜೆಪಿಯಲ್ಲಿ ಮೋದಿ ಪ್ರಧಾನಿಯಾಗುವುದಕ್ಕೆ ಅದೇ ಪಕ್ಷದ ಮುಖಂಡರಾದ ನಿತಿನ್ ಗಡ್ಕರಿ ಹಾಗೂ ರಾಜನಾಥ್ ಸಿಂಗ್ ಬಿಡುವುದಿಲ್ಲ. ಉತ್ತರಪ್ರದೇಶದಲ್ಲಿ ಬಿಜೆಪಿ 70 ಸ್ಥಾನ ಕಳೆದುಕೊಳ್ಳಲಿದ್ದು, ದಕ್ಷಿಣ ಭಾರತದಲ್ಲಿ ಕೇವಲ 5 ಸ್ಥಾನ ಪಡೆದುಕೊಳ್ಳಲಿದೆ ಎಂದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭ್ರಷ್ಟಾಚಾರಯುಕ್ತ ವ್ಯಕ್ತಿಯನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿರುವುದು ಏಕೆ? ರೆಡ್ಡಿ ಸಹೋದರರು ಹಾಗೂ ಬೆಂಬಲಿಗರಿಗೆ ಬಿಜೆಪಿ ಟಿಕೆಟ್ ನೀಡಿದೆ ಎಂಬ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿದೆ. ಇಂತಹವರಿಂದ ಭ್ರಷ್ಟಾಚಾರದ ಬಗ್ಗೆ ಏನನ್ನು ನಿರೀಕ್ಷಿಸಲು ಸಾಧ್ಯ ಎಂದು ಬಿಜೆಪಿ ಕಾಲೆಳೆದರು. ಯುವಕರಿಗೆ ಉದ್ಯೋಗ ಕೊಡುತ್ತೇವೆಂದು ಹೇಳುತ್ತಾ ಬೆಂಗಳೂರಿನ ಹೆಚ್.ಎ.ಎಲ್ ನಂತಹ ಪ್ರಮುಖ ಕಾರ್ಖಾನೆಗಳನ್ನ ಕಡೆಗಣಿಸುತ್ತಿದ್ದಾರೆ. ಹೆಚ್.ಎ.ಎಲ್ ಬರಬೇಕಿದ್ದ ಒಪ್ಪಂದ ರದ್ದು ಮಾಡಿ ಇಲ್ಲಿನ ಯುವಕರಿಗೆ ಅನ್ಯಾಯ ಮಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಮಾತನಾಡಬೇಕು ಎಂದರು.


ಸಂಬಂಧಿತ ಟ್ಯಾಗ್ಗಳು

Rahul Gandhi amit shah ಅನ್ಯಾಯ ಕಾರ್ಖಾನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ