ಲಾರಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

Accident

09-05-2018

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯ ಬೇಗೂರು ಬಳಿ ವೇಗವಾಗಿ ಬಂದ ಲಾರಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ  ಮೂವರು ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ರಾತ್ರಿ ಎಲೆಕ್ಟ್ರಾನಿಕ್ ಸಿಟಿಯ ಬೇಗೂರು ಬಳಿ ನಡೆದಿದೆ.

ಹೆಚ್‍ಎಸ್‍ಆರ್ ಲೇಔಟ್ ಸುಭಾಷ್‍ನಗರದ ರಾಜೇಶ್(25) ಧನಶೇಖರ್(23)ಹಾಗೂ ಹೇಮಂತ್(20) ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ.ಹೆಚ್‍ಎಸ್‍ಆರ್ ಲೇಔಟ್‍ನಿಂದ ಈ ಮೂವರು ಸ್ಯಾಂಟ್ರೋ ಕಾರಿನಲ್ಲಿ  ಬೇಗೂರು ನೈಸ್ ರಸ್ತೆಯ ಬಳಿ ರಾತ್ರಿ 10ರ ವೇಳೆ ಹೋಗುತ್ತಿದ್ದರು.

ಈ ವೇಳೆ ವೇಗವಾಗಿ ಎದುರಿನಿಂದ ಬಂದ ರಾಜಸ್ಥಾನ ಮೂಲದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರತೆಗೆಯಲು ಹರಸಾಹಸ ಪಡಬೇಕಾಯಿತು

ಅಪಘಾತದ ಮಾಹಿತಿ ತಿಳಿದ ತಕ್ಷಣ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಪಘಾತಗೊಂಡ ವಾಹನಗಳನ್ನು ತೆರೆವುಗೊಳಿಸಿದ್ದಾರೆ ಅಪಘಾತವೆಸಗಿದ ಲಾರಿ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಅನುಪಮ್ ಅಗರ್‍ವಾಲ್ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ