ಪೆಟ್ರೋಲ್ ಬಂಕ್ ನಲ್ಲಿ ದರೋಡೆ

Robbery in petrol bunk

10-05-2018 225

ಮಂಡ್ಯ: ಮದ್ದೂರು ಸಮೀಪದ ಶಿವಪುರದಲ್ಲಿನ ಪೆಟ್ರೋಲ್ ಬಂಕ್ ಒಂದರಲ್ಲಿ ದರೋಡೆ ನಡೆದಿದೆ. ನಿನ್ನೆ ಮುಂಜಾನೆ 3ಗಂಟೆಯಲ್ಲಿ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೆದ್ದಾರಿ ಬದಿ ಇರುವ ಗಣೇಶ ಪೆಟ್ರೋಲ್ ಬಂಕ್ ಗೆ ಟಾಟಾ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ಮುಸುಕುಧಾರಿಗಳು, ನೌಕರ ಶ್ರೀಕಾಂತ್ ಮೇಲೆ ಲಾಂಗ್ ನಿಂದ ಹಲ್ಲೆ ಮಾಡಿ, ಮೂರೂವರೆ ಸಾವಿರ ನಗದು, ಸಿಸಿಟಿವಿ ರೆಕಾರ್ಡರ್ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

petrol Bunk Robbery ಬೆರಳಚ್ಚು ತಜ್ಞ ಶ್ವಾನದಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ