‘ಸೋಲಿನ ಭಯದಿಂದ ಬಿಜೆಪಿಯವರು ಹತಾಶರಾಗಿದ್ದಾರೆ’10-05-2018

ಹುಬ್ಬಳ್ಳಿ: ಬಿಜೆಪಿಯವರು ಸೋಲಿನ ಭಯದಿಂದ ಹತಾಶರಾಗಿದ್ದಾರೆ. ಜಾತಿ ಹೆಸರಲ್ಲಿ ಮತಯಾಚನೆ ಕೆಲಸ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಸಾದ್ ಅಬ್ಬಯ್ಯ, ಎಸ್‌ಡಿಪಿಐ ಬೆಂಬಲಿಸಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಉಗ್ರ ಸಂಘಟನೆಯಲ್ಲಿ ಇದ್ದವರನ್ನು ಪಕ್ಕದಲ್ಲಿ ಕೂರಿಸಿಕೊಂಡಿದ್ದೆ ಎಂದು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಆಹ್ವಾನದ ಮೇರೆಗೆ ಸಭೆಗಳಲ್ಲಿ ಭಾಗವಹಿಸಿದ್ದೇನೆ. ನನ್ನ ಅಕ್ಕಪಕ್ಕ ಕುಳಿತುಕೊಳ್ಳುವವರ ಚರಿತ್ರೆ ನಮಗೆ ಗೊತ್ತಿರಲ್ಲ. ಜಾತಿ, ಧರ್ಮದಲ್ಲಿ ಒಡಕು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ನಾನೂ ಹಿಂದು ಆಗಿದ್ದು, ಎಲ್ಲ ಸಮಾಜದ ಮುಖಂಡರು ನನ್ನ ಜೊತೆಗಿದ್ದಾರೆ. ಕೇವಲ ಮುಸ್ಲಿಂ ಸಮುದಾಯಕ್ಕೆ ಕೆಲಸ ಮಾಡಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಾನು ಎಲ್ಲ ಸಮಾಜದ ಒಳಿತಿಗಾಗಿ ಕೆಲಸ ಮಾಡಿದ್ದೇನೆ. ಹಿಂದೂ ದೇವಸ್ಥಾನಗಳು, ಸಮುದಾಯ ಭವನಗಳ ಅಭಿವೃದ್ಧಿಗೆ ಅನುದಾನ ಕೊಟ್ಟಿದ್ದೇನೆ ಎಂದರು.


ಸಂಬಂಧಿತ ಟ್ಯಾಗ್ಗಳು

Abbayya Prasad Hubballi-dharwad ಆಹ್ವಾನ ಚರಿತ್ರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ