ಚಾಮುಂಡೇಶ್ವರಿಯಲ್ಲಿ ಸಿಎಂ ಕೊನೆ ಕಸರತ್ತು

CM siddaramaiah roda show at chamundeshwari

10-05-2018

ಮೈಸೂರು: ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನವಾಗಿದ್ದು, ಮತದಾರರನ್ನು ಸೆಳೆಯಲು ಸಿಎಂ ಕೊನೆಯ ಕಸರತ್ತು ನಡೆಸಿದ್ದಾರೆ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಕ್ಷೇತ್ರಕ್ಕೆ ಸಿಎಂ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ ಸಿಎಂ ಸಿದ್ದು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ನಂತರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ರೋಡ್ ಶೋ ಮೂಲಕ ಮತ ಯಾಚಿಸಿದರು. ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಪ್ರಚಾರ ನಡೆಸಿರುವ ಸಿಎಂ, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಬಹಿರಂಗ ಸಿದ್ದರಾಮಯ್ಯ Road show congress


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ