ಹೊಲದಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ

police constable committed suicide

10-05-2018

ಹಾವೇರಿ: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹೊಂಬಳಿ ಗ್ರಾಮದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಗದೀಶ್ ಬೆಂಡಿಗೇರಿ ( 35) ಮೃತ ಪೇದೆ. ಹಾವೇರಿಯಲ್ಲಿ ಡಿ.ಆರ್.ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ, ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹೋಗುವುದಾಗಿ ಹೇಳಿ ತಮ್ಮ ಹೊಲದಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

constable Suicide ಹೊಲ ಕರ್ತವ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ