ನಲಪಾಡ್ ವಿರುದ್ಧ 600 ಪುಟಗಳ ಚಾರ್ಜ್‍ಶೀಟ್

Nalapad case: charge sheet submitted to court

10-05-2018

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ನಲಪಾಡ್ ಹ್ಯಾರಿಸ್‍ನಿಂದ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಆರೋಪ ಪಟ್ಟಿ(ಚಾರ್ಜ್‍ಶೀಟ್) ಸಲ್ಲಿಸಿದ್ದಾರೆ. ಬೆಂಗಳೂರಿನ ಮೂರನೇ ಎಸಿಎಂಎಂ ಕೋರ್ಟ್‍ಗೆ 600 ಪುಟಗಳ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಸಿಸಿಟಿವಿ ದೃಶ್ಯಗಳನ್ನು ಸಹ ಚಾರ್ಜ್‍ಶೀಟ್‍ನಲ್ಲಿ ಲಗತ್ತಿಸಲಾಗಿದೆ.

ನಲಪಾಡ್ ಹ್ಯಾರಿಸ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಅಶ್ರಫ್, ಬಾಲಕೃಷ್ಣ, ಅಭಿಶೇಕ್ ಮತ್ತು ನಾಸಿರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮತ್ತೊಬ್ಬ ಆರೋಪಿ ಕೃಷ್ಣ ವಿದೇಶದಲ್ಲಿ ಅಡಗಿರಬಹುದು, ಹುಡುಕಾಟ ನಡೆಸುತ್ತಿದ್ದೇವೆ ಎಂದು ಉಲ್ಲೇಖಿಸಲಾಗಿದೆ.

ಫೆಬ್ರವರಿ 17ರಂದು ಯುಬಿ ಸಿಟಿಯ ಫೆರ್ಜಿ ಕೆಫೆಯಲ್ಲಿ ವಿದ್ವತ್‍ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ನಲಪಾಡ್ ಮತ್ತು ಆತನ ಗ್ಯಾಂಗ್ ಸದ್ಯ ಪರಪ್ಪನ ಅಗ್ರಹಾರ ಜೈಲಲ್ಲಿದೆ. ನಲಪಾಡ್ ಅಂಡ್ ಗ್ಯಾಂಗ್ ಆರೋಪಿಗಳಿಗೆ ಸಂಬಂಧಪಟ್ಟ ಪುರಾವೆಗಳನ್ನ ಲಗತ್ತಿಸಲಾಗಿದೆ. ವಿದ್ವತ್, ಆತನ ಸ್ನೇಹಿತರು, ಫೆರ್ಜಿ ಕೆಫೆ ಸಿಬ್ಬಂದಿ ಹಾಗೂ ಮಲ್ಯ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 60 ಸಾಕ್ಷಿಗಳ ಹೇಳಿಕೆ ಸಂಗ್ರಹಿಸಿ ಈ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Nalapa Harris mohammed ಚಾರ್ಜ್ ಶೀಟ್ ವೈದ್ಯಕೀಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ