ಮೋದಿ ಆ್ಯಪ್ ಮೂಲಕ ಪ್ರಧಾನಿ ಸಂವಾದ

PM narendra modi conversation with BJP sc/st activist with modi app

10-05-2018

ಬೆಂಗಳೂರು: ಸಮಾಜದ ಎಲ್ಲಾ ವರ್ಗಗಳ ಅಭಿವೃದ್ಧಿಗೆ ಭಾರತೀಯ ಜನತಾ ಪಕ್ಷ  ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಸ್ಲಂ ಮೋರ್ಚಾ ಕಾರ್ಯಕರ್ತರನ್ನುದ್ದೇಶಿಸಿ ನರೇಂದ್ರ ಮೋದಿ ಆ್ಯಪ್ ಮೂಲಕ ಸಂವಾದ ನಡೆಸಿದರು.

ಎಲ್ಲಾ ಶೋಷಿತ ಸಮುದಾಯಗಳ ಜೊತೆಗೆ ಪ್ರತಿಯೊಂದು ವರ್ಗದ ಜನರ ಅಭಿವೃದ್ಧಿಗೆ ತಮ್ಮ ಸರ್ಕಾರ ಸಮಾನ ಆದ್ಯತೆ ನೀಡುತ್ತಿದೆ. ಹಾಲಿ ಸಂಸದರ ಪೈಕಿ ಬಹುತೇಕರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದು ಅವರು ಹೇಳಿದರು.

ಎಸ್ ಸಿ/ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಲ್ಲಿ ಅಪರಾಧ ಪ್ರಕರಣಗಳನ್ನು 22 ರಿಂದ 47ಕ್ಕೆ ಹೆಚ್ಚಿಸುವ ಮೂಲಕ ತಮ್ಮ ಸರ್ಕಾರ ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. ಎಲ್ಲರನ್ನೂ ಒಳಗೊಂಡ ಆಡಳಿತಕ್ಕೆ ಮಹತ್ವ ನೀಡುತ್ತಿರುವ ಕೇಂದ್ರ ಸರ್ಕಾರ ಯೋಜನೆಗಳ ಬಗ್ಗೆ ಕರ್ನಾಟಕದ ಮನೆ ಮನೆಗೆ ತೆರಳಿ ಜನರಿಗೆ ಮನದಟ್ಟು ಮಾಡಬೇಕೆಂದು ಅವರು ಕಾರ್ಯಕರ್ತರಿಗೆ ಮನವಿ ಮಾಡಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ