ರಾಹುಲ್ ಸುದ್ದಿಗೋಷ್ಠಿ: ಪೀಯೂಷ್‌ ಗೋಯಲ್‌ ಟೀಕೆ

Rahul

10-05-2018

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ರಾಹುಲ್‍ ಗಾಂಧಿ ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಯಾವುದೇ ಪ್ರಯತ್ನವಿರಲಿಲ್ಲ. ಇದೊಂದು ಗಿಳಿಪಾಠದ ಸುದ್ದಿಗೋಷ್ಠಿ, ಯಾವ ಹೊಸ ಅಂಶವೂ ಇರಲಿಲ್ಲ ಎಂದು ಕೇಂದ್ರ ಸಚಿವ ಪೀಯೂಷ್‌ ಗೋಯಲ್‌ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಕೇಳಲಾದ ಪ್ರಶ್ನೆಗಳಲ್ಲಿ ರಾಹುಲ್ ಗಾಂಧಿ ಅವರಿಗೆ ಪ್ರಶ್ನೆ ಕೇಳಲು ಕೆಲವು ಪತ್ರಕರ್ತರಿಗೆ ಅವಕಾಶ ನೀಡಲಿಲ್ಲ ಎಂದು ಆರೋಪಿಸಿದರು.

ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಚೀನಾ ಮತ್ತು ಪಾಕಿಸ್ತಾನ ವಿಷಯಗಳ ಪ್ರಸ್ತಾಪವಿತ್ತು. ಸ್ಥಳೀಯ ವಿಷಯಗಳಿಗೆ ಆದ್ಯತೆ ಇಲ್ಲದೆ ಅರ್ಥಹೀನವಾಗಿತ್ತು. ಕೆಲವು ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನವೇ ಇರಲಿಲ್ಲ. ಅಥವಾ ಅವರ ಬಳಿ ಉತ್ತರಗಳು ಇರಲಿಲ್ಲ ಎಂದು ಅವರು ಟೀಕಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ