ಶಾಸಕ ಸತೀಶ್ ಸೈಲ್ ಆಪ್ತನ ಮನೆ ಮೇಲೆ ಐಟಿ ದಾಳಿ

IT Raid at karwar

11-05-2018

ಕಾರವಾರ: ಕಾರವಾರ ಶಾಸಕ ಹಾಗು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಆವರ್ಸಾದಲ್ಲಿರುವ ಶಾಸಕನ ಆಪ್ತ ಮಂಗಲದಾಸ ಕಾಮತ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಮನೆ ಸೇರಿದಂತೆ ಇತರೆ ದಾಖಲೆಗಳಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಹಾಗೂ ಹುಬ್ಬಳ್ಳಿ ಆದಾಯ ತೆರಿಗೆ ಅಧಿಕಾರಿಗಳ ತಂಡ ಈ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಮೊನ್ನೆಯಷ್ಟೆ ಆನಂದ್ ಸಿಂಗ್ ಒಡೆತನದ ರೆಸಾರ್ಟ್ ಮೇಲೆ ದಾಳಿ ನಡೆದಿತ್ತು, ಇದರ ಬೆನ್ನಲ್ಲೇ ಈ ದಾಳಿ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Satish Sail IT Raid ರೆಸಾರ್ಟ್ ಶಾಸಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ