ಆಂತರಿಕ ಕಚ್ಚಾಟಗಳು ಚುನಾವಣೆ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳು ಇವೆ !

Kannada News

23-05-2017

ತುಮಕೂರು:- ರಾಜ್ಯದಲ್ಲಿ 2017ರ ಅಂತ್ಯಕ್ಕೆ ಚುನಾವಣೆ ಎದುರಾಗುವ ಎಲ್ಲಾ ಸಾಧ್ಯತೆಗಳಿದ್ದು,ಜನರು ಈ ಹಿಂದೆ ಮಾಡಿದ ತಪ್ಪನ್ನು ಮಾಡದೆ ಎಚ್ಚೆತ್ತುಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಅಶೋಕ ರಸ್ತೆಯ, ಪಕ್ಷದ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳ ರಾಜ್ಯ ಸರಕಾರದ ಆಡಳಿತದಿಂದ ಜನ ಬೇಸತ್ತಿದ್ದಾರೆ.ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಕಚ್ಚಾಟಗಳು ಚುನಾವಣೆ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳು ಇವೆ. ಹಾಗಾಗಿ ಕಾರ್ಯಕರ್ತರು,ಜನರ ಬಳಿಗೆ ಈ ಬಾರಿ ಜೆಡಿಎಸ್ ಪಕ್ಷಕ್ಕೆ ಅವಕಾಶ ನೀಡುವಂತೆ ಅವರ ಮನವೊಲಿಸುವ ಕೆಲಸ ಮಾಡಬೇಕು ಎಂದರು. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸುಮಾರು 6500 ಕಿ.ಮಿ. ಪ್ರವಾಸ ಮಾಡಿರುವ ಅವರು, ಮುಂಬೈ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳು ಬರದಿಂದ ತತ್ತರಿಸಿ ಹೋಗಿವೆ. ಕಲ್ಪತರು ನಾಡು ಎಂದು ಕರೆಯಲು ಕಾರಣವಾದ ತೆಂಗು ತೋಟವೂ ಒಣಗಿರುವುದನ್ನು ನೋಡಿದರೆ ನಮ್ಮ ಕಣ್ಣಲ್ಲಿಯೂ ನೀರು ತರಿಸುತ್ತದೆ. ಒಂದೆಡೆ ಮಳೆಯಿಲ್ಲದೆ ಗಿಡಗಳು ಒಣಗುತ್ತಿದ್ದರೆ,ಇನ್ನೊಂದೆಡೆ ಬೆಂಬಲ ಬೆಲೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ