ಅಕ್ರಮ ಹಣ ಸಾಗಿಸುತ್ತಿದ್ದ ವಾಹನ ಜಖಂ!

Illegal Money 1.5 crore in bolero vehicle!

11-05-2018

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಪರ 1.5 ಕೋಟಿ ಹಣ ತೆಗೆದುಕೊಂಡು ಹೋಗುತ್ತಿದ್ದ ವಾಹನವನ್ನು ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಕೆ.ಎ 25 ಎಂಬಿ 5367 ನಂಬರ್ ನ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಹಣದ ಬ್ಯಾಗ್ ನೊಂದಿಗೆ ಇಬ್ಬರು ಬಿಜೆಪಿ ಕಾರ್ಯಕರ್ತರು ಪರಾರಿಯಾಗಿದ್ದಾರೆ. ಹಣ ಸಾಗಿಸುತ್ತಿದ್ದ ಬೊಲೆರೊ ವಾಹನದ ಗಾಜು ಪುಡಿಪುಡಿ ಮಾಡಿದ್ದಾರೆ ಸ್ಥಳೀಯರು.

ರಾಯಬಾಗ ಮಿಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದುರ್ಯೋಧನ ಐಹೊಳೆ ಪರ ಮತದಾರರಿಗೆ ಹಂಚಲು ಹಣ ತೆಗೆದುಕೊಂಡು ಹೋಗುತ್ತಿದ್ದರು ಎಂಬ ಮಾತುಗಳು ಕೇಳಿಬಂದಿವೆ. ಹಣ ತೆಗೆದುಕೊಂಡು ಪರಾರಿಯಾದ ಅಣ್ಣಾಸಾಬ ಖೇಮಲಾಪುರೆ, ಸದಾಶಿವ ಘೋರ್ಪಡೆ, ಬಿಜೆಪಿ ಪ್ರಭಾವಿ ಬೆಲ್ಲದ್ ಅವರ ಮನೆಯಲ್ಲಿ ಅಡಗಿ ಕುಳಿತಿರು ಶಂಕೆ ವ್ಯಕ್ತಪಡಿಸಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು.

ಇನ್ನು ವಾಹನ ಚಾಲಕನ ಬಳಿ ಇದ್ದ 1 ಲಕ್ಷ ರೂ. ಜಪ್ತಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಾಹನ ಚಾಲಕ ಆನಂದ ಅಕ್ಕಿಮರಡಿಯನ್ನು ವಶಕ್ಕೆ ಪಡೆದು ವಿಚರಣೆ ಕೈಗೊಂಡಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

election Money ಪ್ರಕರಣ ಶಂಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ