ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

karnataka election: police high security at Hubballi

11-05-2018

ಹುಬ್ಬಳ್ಳಿ: ನಾಳೆ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತಗಟ್ಟೆಗಳ ಮೇಲೆ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. ಚುನಾವಣೆಗೆ ಬಿಗಿ ಬಂದೊಂಬಸ್ತ್ ಮಾಡಲಾಗಿದ್ದು, ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ಹೈಸ್ಕೂಲ್ ನಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಮತ ಚಲಾವಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಮತಗಟ್ಟೆಯಲ್ಲಿ ಮಿಲಿಟರಿ ಪಡೆಯನ್ನೂ ಸಹ ನಿಯೋಜಿಸಲಾಗಿದೆ.

ವ್ಯವಸ್ಥಿತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಸಿಬ್ಬಂದಿಯವರಿಗೆ ಪೊಲೀಸ್ ಅಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಮತಗಟ್ಟೆಗಳಿಗೆ ಚುನಾವಣಾ ಮತ ಯಂತ್ರಗಳು ಬಂದಿದ್ದು, ಮತ ಯಂತ್ರಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅವಘಡ ಸಂಭವಿಸದಂತೆ ಶಿಸ್ತು ಕ್ರಮ ಕೈಗೊಳ್ಳುಳ್ಳಲಾಗಿದೆ.


ಸಂಬಂಧಿತ ಟ್ಯಾಗ್ಗಳು

election voting machine ನಿರ್ದೇಶನ ಮಿಲಿಟರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ