ಅರೆ ಬೆಂದ ಸ್ಥಿತಿಯಲ್ಲಿ ಶವ ಪತ್ತೆ

Half burnt dead body found at chamundeshwari

11-05-2018

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಅರೆ ಬೆಂದ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ವಾಜಮಂಗಲದ ಕಿರಣ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ವಾಕಿಂಗ್ ಮಾಡುವ ವೇಳೆ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ದೇಹದ ಪಕ್ಕದಲ್ಲೇ ಕೆಲ ದಾಖಲಾತಿಗಳು ಪತ್ತೆಯಾಗಿವೆ. ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರಿನ ಕೆ.ಆರ್.ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

burnt dead body Chamundeshwari Murder


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Learning
  • N Narasimha Murthy
  • Lic agent