ವಿನಯ್ ಕುಲಕರ್ಣಿ ಆಪ್ತನ ಮನೆ ಮೇಲೆ ಐಟಿ ದಾಳಿ

IT raid continued at dharwad

11-05-2018

ಧಾರವಾಡ: ಸಚಿವ ವಿನಯ್ ಕುಲಕರ್ಣಿ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವ ವಿನಯ್ ಆಪ್ತ ಪ್ರಶಾಂತ ಕೇಕರೆಯವರ ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿರುವ ಪ್ರಶಾಂತ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಪ್ರಶಾಂತ ಸಚಿವರಿಗೆ ಸಂಬಂಧಿಸಿದಂತೆ ರಾಜಕೀಯ ವಿಚಾರಗಳನ್ನು ನೋಡಿಕೊಳ್ಳುತ್ತಿದ್ದರು.  ನಿನ್ನೆ ರಾತ್ರಿಯೇ ಐಟಿ ಅಧಿಕಾರಿಗಳು ಪ್ರಶಾಂತನನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿಯಿಂದಲೇ ಮೊಬೈಲ್ ಸಂಪರ್ಕಕ್ಕೆ ಸಿಗದ ಪ್ರಶಾಂತರನ್ನು ಬೆಳಿಗ್ಗೆ ಮತ್ತೆ ಮನೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಎರಡು ಕಾರುಗಳಲ್ಲಿ ಬಂದಿರುವ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಸಚಿವ ವಿನಯ ಕುಲಕರ್ಣಿಯವರ ಪ್ರಭಾವವನ್ನು ಕುಗ್ಗಿಸಲು ಐಟಿ ದಾಳಿ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಐಟಿ ಇಲಾಖೆಯನ್ನ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂಬ ಆರೋಪ ಮಾಡಿದ್ದಾರೆ.

 

 

 


ಸಂಬಂಧಿತ ಟ್ಯಾಗ್ಗಳು

Vinay Kulkarni IT Raid ರಾಜಕೀಯ ಅಸ್ತ್ರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ