ಗೌರಿ ಹತ್ಯೆ: ಎಸ್‍ಐಟಿಯಿಂದ ಮತ್ತೊಬ್ಬ ವ್ಯಕ್ತಿಯ ವಿಚಾರಣೆ

Gauri murder: another person inquiry by SIT

11-05-2018

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಈಗ ಬಂಧನಕ್ಕೊಳಗಾಗಿರುವ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜ ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ಮೂಲದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದೆ. ಶಂಕಿತನನ್ನು ತೀವ್ರ ವಿಚಾರಣೆಗೊಳಪಡಿಸಿದ ಎಸ್‍ಐಟಿ ಅಧಿಕಾರಿಗಳು ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಬಂಧಿಸದೇ ಆತನನ್ನು ಬಿಡುಗಡೆ ಮಾಡಿದ್ದಾರೆ.

ಹೊಟ್ಟೆ ಮಂಜ ನೀಡಿದ ಮಾಹಿತಿ ಆಧಾರದ ಮೇಲೆ ಮಂಗಳೂರು ಮೂಲದ ಯುವಕನನ್ನು ವಿಚಾರಣೆಗೊಳಪಡಿಸಲಾಗಿತ್ತು. ಆದರೆ ಪೂರಕ ಅಂಶಗಳು ಆತನ ವಿಚಾರಣೆಯಿಂದ ಹೊರ ಬಾರದ ಹಿನ್ನೆಲೆಯಲ್ಲಿ ಆತನನ್ನು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಲಾಗಿದೆ. ಆತನ ಚಲನವಲನಗಳ ಮೇಲೆ ಎಸ್‍ಐಟಿ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪ್ರಕರಣಕ್ಕೆ ಸಿಗುವ ಸಣ್ಣ ಮಾಹಿತಿಯನ್ನೂ ವಿಶೇಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‍ಐಟಿ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ 2017ರ ಸೆ. 5 ರಂದು ಗೌರಿಯನ್ನು ರಾಜರಾಜೇಶ್ವರಿ ನಗರದ ಅವರ ಮನೆಯ ಮುಂದೆ ಗುಂಡಿಕ್ಕಿ ಕೊಲ್ಲಲಾಗಿದ್ದು ಕೃತ್ಯದ ಸಂಬಂಧ ಕೆ.ಟಿ. ನವೀನ್ ಕುಮಾರ್ ನನ್ನು ಬಂಧಿಸಿ ಹಲವರನ್ನು ವಿಚಾರಣೆಗೊಳಪಡಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

SIT gauri lankesh ಎಸ್‍ಐಟಿ ವಿಚಾರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ