ಕೇಂದ್ರ, ರಾಜ್ಯ ಗುಪ್ತಚರ ಮಾಹಿತಿ ಪ್ರಕಾರ ಯಾರಿಗೆ ಎಷ್ಟು ಸ್ಥಾನ?

14-05-2018
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈಗಾಗಲೇ ಅನೇಕ ಸಂಸ್ಥೆಗಳು ಬಿಡುಗಡೆ ಮಾಡಿರುವ ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಮಾಹಿತಿ ನೀಡಲಾಗಿದೆ.
ಒಂದೆರಡು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಇಲ್ಲವೇ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎನ್ನಲಾಗಿದೆ. ಬಹುತೇಕ ಸಮೀಕ್ಷೆಗಳು ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ತಿಳಿಸಿವೆ. ಇನ್ನು ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆಯೂ ಮಾಹಿತಿ ಕಲೆ ಹಾಕಿದ್ದು, ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ.
ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್-102, ಬಿಜೆಪಿ-70, ಜೆಡಿಎಸ್-28 ಸ್ಥಾನಗಳಲ್ಲಿ ಜಯಗಳಿಸಬಹುದಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್ 95 ರಿಂದ 102 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಬಿಜೆಪಿ 80 ರಿಂದ 85 ಹಾಗೂ ಜೆಡಿಎಸ್ 35 ರಿಂದ 40 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. 30 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಇದೆ. 10 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್, 10 ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಮಾಹಿತಿ ಪ್ರಕಾರ, ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಗಳಿಸಲಿರುವ ಸ್ಥಾನಗಳಲ್ಲಿ 10 ಸ್ಥಾನ ಹೆಚ್ಚು, ಕಡಿಮೆ ಆಗಲಿವೆ.
ಗುಪ್ತಚರ ಇಲಾಖೆ ಸಾಮಾನ್ಯವಾಗಿ ಆಡಳಿತದಲ್ಲಿರುವ ಪಕ್ಷಗಳ ಪರವಾಗಿಯೇ ವರದಿ ನೀಡುತ್ತದೆ ಎಂಬ ಅಪವಾದ ಕೂಡ ಇದೆ. ಫಲಿತಾಂಶದ ಬಗ್ಗೆ ನಿಖರವಾದ ಮಾಹಿತಿಯನ್ನು ತಿಳಿಯಲು ನಾಳೆ ಮಧ್ಯಾಹ್ನದವರೆಗೆ ಕಾಯಬೇಕಿದೆ.
ಒಂದು ಕಮೆಂಟನ್ನು ಹಾಕಿ