ಜಯನಗರದಿಂದ ತಾರಾ ಅನುರಾಧ ಕಣಕ್ಕೆ?

will tara anuradha will contest from jayanagar?

14-05-2018

ಬೆಂಗಳೂರು: ಶಾಸಕ ವಿಜಯ್ ಕುಮಾರ್ ನಿಧನದಿಂದ ಮುಂದೂಡಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣಕ್ಕೆ ನಟಿ ತಾರಾ ಅನುರಾಧ ಎಂಟ್ರಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಮೇ 28ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೇ 28ರಂದು ಜಯನಗರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ.

ಸಧ್ಯ ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿಯ ಹುಡುಕಾಟದಲ್ಲಿರೋ ಬಿಜೆಪಿ ನಾಯಕರು ಹಾಲಿ ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧಾಗೆ ಟಿಕೆಟ್ ನೀಡಲು ಚಿಂತನೆ ನಡೆಸಿದ್ದಾರೆ ಎಂದೆನ್ನಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಟಾರ್ ಕ್ಯಾಂಪೇನರ್ ಆಗಿದ್ದರು ತಾರಾ. ಕಮಲ ಪಾಳಯದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತಾರಾಗೆ ಟಿಕೆಟ್ ಫೈನಲ್ ಮಾಡೋ ಸಾಧ್ಯತೆಗಳು ದಟ್ಟವಾಗಿವೆ ಎಂದು ಹೇಳಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Tara Anuradha jayanagar ಅಭ್ಯರ್ಥಿ ಫೈನಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ