ಬೊಲೆರೊ ವಾಹನ ಪಲ್ಟಿ: ಓರ್ವ ಸಾವು

Bolero and tempo vehicle accident one death

14-05-2018

ಬೆಂಗಳೂರು: ಚಿಕ್ಕಬಳ್ಳಾಪುರದ ಬೀಚಗಾನಹಳ್ಳಿ ಕ್ರಾಸ್ ಬಳಿ ಪಲ್ಟಿಯಾದ ಬೊಲೆರೊ ಗೂಡ್ಸ್ ವಾಹನಕ್ಕೆ 407 ಟೆಂಪೋಗೆ ಡಿಕ್ಕಿ  ಹೊಡೆದು ಓರ್ವ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಆಂಧ್ರದ ಧರ್ಮಾವರಂ ಮೂಲದ ಲಿಂಗಮಯ್ಯ(45) ಮೃತಪಟ್ಟವರು. ಗಾಯಗೊಂಡಿರುವ ಶ್ರೀನಿವಾಸಲು ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ.

ರಾಷ್ಟ್ರೀಯ ಹೆದ್ದಾರಿ 7ರ ಬೀಚಗಾನಹಳ್ಳಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂಯತ್ರಣ ತಪ್ಪಿದ ಬೊಲೆರೊ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ 407 ಟೆಂಪೋ ಕೂಡ ಬೊಲೆರೊಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Accident Tempo ಅಪಘಾತ ಗಂಭೀರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ