7 ಕ್ಷೇತ್ರಗಳ ಫಲಿತಾಂಶ ಪ್ರಶ್ನಿಸಿ ಕಾಂಗ್ರೆಸ್ ದೂರು

The Congress complained about the results of the 7 constituencies

15-05-2018

ದಕ್ಷಿಣ ಕನ್ನಡ: ಜಿಲ್ಲೆಯ ಏಳು ಕ್ಷೇತ್ರಗಳ ಫಲಿತಾಂಶ ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ‌ಚುನಾವಣಾ ತಕರಾರು ಅರ್ಜಿ ಸಲ್ಲಿಸಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ ಮತ್ತು ಮೂಡುಬಿದಿರೆ ಕ್ಷೇತ್ರಗಳ ಫಲಿತಾಂಶ ಕುರಿತು ಚುನಾವಣಾ ಅಧಿಕಾರಿಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಮತ್ತು ಅವರ ಚುನಾವಣಾ ಏಜೆಂಟರಿಂದ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ವಿದ್ಯುನ್ಮಾನ ಮತಯಂತ್ರಗಳ ಮೇಲೆ ಶಂಕೆ‌ ವ್ಯಕ್ತಪಡಿಸಿ ದೂರು ನೀಡಿದ್ದು, ನಾಳೆ ಬೆಳಿಗ್ಗೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್‌ ಗೆ ವಿಸ್ತೃತ ತಕರಾರು ಅರ್ಜಿ ಸಲ್ಲಿಲಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ