ಕಮಲ ಯಥಾಸ್ಥಿತಿ..ಕೈ ಚೇತರಿಕೆ..ಎಂಇಎಸ್ ನಿರ್ನಾಮ!

Belagavi: Congress-BJP-MES seats?

15-05-2018

ಬೆಳಗಾವಿ: ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಳಗಾವಿಯ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಜಿಲ್ಲೆಯ 18 ಕ್ಷೇತ್ರಗಳ ಪೈಕಿ 10 ಕ್ಷೇತ್ರದಲ್ಲಿ ಬಿಜೆಪಿ, 8 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿವೆ. ಇನ್ನೂ ಭಾಷೆ, ಗಡಿ ವಿಚಾರದಲ್ಲಿ ಸದಾ ಕ್ಯಾತೆ ತೆಗೆಯುತ್ತಿದ್ದ ಎಂಇಎಸ್ ಈ ಬಾರಿ ನಿರ್ನಾಮವಾಗಿದೆ.

ಸಕ್ಕರೆ ಜಿಲ್ಲೆ ಬೆಳಗಾವಿಯಲ್ಲಿ ಈ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಯಾತಾಸ್ಥಿತಿ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಚೇತರಿಸಿಕೊಂಡಿದೆ. ಇನ್ನೂ ಜಿಲ್ಲೆಯಲ್ಲಿ ಎಂಇಎಸ್ ಈ ಬಾರಿ ನಾಮಾವಶೇಷ ಆಗಿದೆ. ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಗೆದ್ದಿದ್ದಾರೆ ಇಲ್ಲಿದೆ ನೋಡಿ.

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಿಲ್ ಬೆನಕೆ ವಿಜಯ ಪತಾಕೆ ಹಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪಿರೋಜ್ ಸೇಠ್ ವಿರುದ್ಧ 17,264 ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಅಭಯ ಪಾಟೀಲ್ 84,498 ಮತಗಳನ್ನು ಪಡೆದು ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಡಿ.ಲಕ್ಷ್ಮೀ ನಾರಾಯಣ 25,806 ಮತ ಪಡೆದು ಸೋತಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಜಯ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಂಜಯ ಪಾಟೀಲ್ ಕೇವಲ 50316 ಮತಗಳನ್ನು ಪಡೆಯುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸೋತಿದ್ದಾರೆ.

ಇನ್ನು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ ಹುಕ್ಕೇರಿ ಗೆದ್ದಿದ್ದಾರೆ. ಗಣೇಶ ಹುಕ್ಕೇರಿಗೆ 91,467 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ 80,898 ಮತಗಳನ್ನು ಪಡೆದಿದ್ದಾರೆ. ಅರಬಾವಿ ಕ್ಷೇತ್ರದಲ್ಲಿ ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ, ಜೆಡಿಎಸ್ ಅಭ್ಯರ್ಥಿ ಭೀಮಪ್ಪ ಗಡಾದ್ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಮೇಶ ಜಾರಕಿಹೊಳಿ, ಬಿಜೆಪಿ ಅಭ್ಯರ್ಥಿ ಅಶೋಕ ಪೂಜಾರಿ ವಿರುದ್ಧ ಗೆದ್ದಿದ್ದಾರೆ. ಕುಡುಚಿಯಲ್ಲೂ ಬಿಜೆಪಿ ಅಭ್ಯರ್ಥಿ ಪಿ.ರಾಜೀವ ವಿಜೇಯರಾಗಿದ್ದಾರೆ.

ಯಮಕನಮರಡಿ ಕ್ಷೇತ್ರೆದಲ್ಲಿ ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ 73,512 ಮತಗಳನ್ನು ಪಡಯುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ 70,662 ಮತಗಳನ್ನು ಪಡೆದಿದ್ದಾರೆ.

ಸವದತ್ತಿಯಲ್ಲಿ ಬಿಜೆಪಿಯ ಆನಂದ ಮಾಮನಿ ( ವಿಶ್ವಾನಾಥ ಚಂದ್ರಶೇಖ ಮಾಮಾನಿ) ಗೆದ್ದಿದ್ದಾರೆ. ಇನ್ನು ಕಿತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡರ, ಕಾಂಗ್ರೆಸ್ ಅಭ್ಯರ್ಥಿ ಇನಾಮದಾರ್ ವಿರುದ್ಧ ಗೆಲುವನ್ನು ಪಡೆದಿದ್ದಾರೆ.

ಕಾಗವಾಡ, ಮತ್ತು ಅಥಣಿಯಲ್ಲಿ ಕಾಂಗ್ರೆಸ್ ಗೆದ್ದಿದೆ. ಕಾಗವಾಡದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮಂತ ಪಾಟೀಲ್, ಬಿಜೆಪಿಯ ಭರಮಗೌಡ ಕಾಗೆ ಅವರನ್ನು ಸೋಲಿಸಿದ್ದಾರೆ. ಅಥಣಿಯಲ್ಲಿ ಕಾಂಗ್ರೆಸ್ ನ ಮಹೇಶ ಕುಮಠಳ್ಳಿ, ಬಿಜೆಪಿಯ ಲಕ್ಷ್ಮಣ ಸವದಿಯನ್ನು ಸೋಲಿಸಿದ್ದಾರೆ.

ಖಾನಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಂಜಲಿ ನಿಂಬಾಳ್ಕರ್ ಗೆದ್ದಿದ್ದಾರೆ. ರಾಮದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಮಹಾದೇವಪ್ಪ ಯಾದವಾಡ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಪಟ್ಟಣ ವಿರುದ್ಧ 2867 ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ರಾಯಬಾಗದಲ್ಲಿ  ಬಿಜೆಪಿಯ ದುರ್ಯೋದನ ಐಹೋಳೆ ಗೆಲುವನ್ನು ಸಾಧಿಸಿದ್ದಾರೆ.

ನಿಪ್ಪಾಣಿಯಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಗೆಲುವನ್ನು ಪಡೆದರು, ಕಾಂಗ್ರೆಸ್ ಅಭ್ಯರ್ಥಿ ಕಾಕಾಸಾಹೇಬ್ ಪಾಟೀಲ್ ವಿರುದ್ಧ ಸ್ಪರ್ಧಿಸಿದ್ದರು. ಬೈಲಹೊಂಗಲದಲ್ಲಿ ಕಾಂಗ್ರೆಸ್ ನ ಮಹಾಂತೇಶ ಕೌಜಲಗಿ  44306 ಮತಗಳನ್ನು ಪಡೆದು, ಪಕ್ಷೇತರ ಅಭ್ಯರ್ಥಿ ಜಗದೀಶ ಮೆಟಗುಡ್ಡ ವಿರುದ್ಧ ಗೆಲುವು ಸಾಧಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Belagavi constituency ಶಶಿಕಲಾ ಜೊಲ್ಲೆ ರಾಯಬಾಗ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ