‘ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸಿದೆ’- ಶರವಣ16-05-2018

ಬೆಂಗಳೂರು: ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ಹಿನ್ನೆಲೆ ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಎಂಎಲ್ಸಿ ಶರವಣ, ಬಿಜೆಪಿ ನಾಯಕರು ನಮ್ಮ ನಾಲ್ಕೈದು ಶಾಸಕರನ್ನು ಸಂಪರ್ಕ ಮಾಡಿದ್ದಾರೆ. ಶಿರಾ ಶಾಸಕರನ್ನ ಸೆಳೆಯಲು ಪ್ರಯತ್ನ ಮಾಡಿದ್ದರು. ಆದರೆ, ಅದನ್ನ ನಮ್ಮ ಶಾಸಕರು ತಿರಸ್ಕಾರ ಮಾಡಿದ್ದಾರೆ. ನಮ್ಮ ಶಾಸಕರು ಯಾರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹೇಳಿದ್ದಾರೆ. ಇಂದಿನ ಜೆಡಿಎಸ್ ಶಾಸಕಾಂಗ ಸಭೆಗೆ ಬಹುತೇಕ ಶಾಸಕರು ಬಂದಿದ್ದಾರೆ. ಎಲ್ಲಾ ಶಾಸಕರು ನಮ್ಮ ಜೊತೆ ಇದ್ದಾರೆ. ನಮ್ಮ ಶಾಸಕರು ಪಕ್ಷದಲ್ಲೇ ಇರುತ್ತಾರೆ. ದೇವೇಗೌಡರು ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

TA Sharavana MLC ದೇವೇಗೌಡರು ನಾಯಕರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ