‘ಕೈ-ಜೆಡಿಸ್ ಸಮ್ಮಿಶ್ರವಾದರೆ ಹಾಸನದಲ್ಲಿ ಕಾಂಗ್ರೆಸ್ ಸಮಾಧಿ’-ಮಂಜೇಗೌಡ16-05-2018 541

ಹಾಸನ: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ‌ ವಿಚಾರವಾಗಿ ಪ್ರತಿಕ್ರಿಯಿಸಿದ ಬಾಗೂರು ಮಂಜೇಗೌಡ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರವಾದರೆ, ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಸಮಾಧಿಯಾಗಲಿದೆ, ಕಾಂಗ್ರೆಸ್ ಕಾರ್ಯಕರ್ತರ ಕಗ್ಗೊಲೆಯಾಗಲಿದೆ ಎಂದು ಹೇಳಿದ್ದಾರೆ.

ತಾವು ಸ್ಪರ್ಧಿಸುತ್ತಿದ್ದ  ಕ್ಷೇತ್ರಕ್ಕೆ ತಮ್ಮ ಪರ ಪ್ರಚಾರಕ್ಕೆ ಸಿದ್ದರಾಮಯ್ಯ ಬಂದಿಲ್ಲ ಎಂದು  ಸಿದ್ದರಾಮಯ್ಯ ಮತ್ತು ಸಮ್ಮಿಶ್ರ ಸರ್ಕಾರ ರಚನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಜೇಗೌಡ ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್ ನ ಪರಾಜಿತ ಅಭ್ಯರ್ಥಿ.‘ಸಿದ್ದರಾಮಯ್ಯ ಅವರ ಮೇಲೆ ಯಾವ ಒತ್ತಡ ಇತ್ತೋ ನನಗೆ ಗೊತ್ತಿಲ್ಲ, ನಾನು ಹರಕೆಯ ಕುರಿ ಆಗಿಲ್ಲ, ಬಲಿಪಶುವೂ ಆಗಿಲ್ಲ’ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕುಮಾರಸ್ವಾಮಿ ಸಿಎಂ ಆಗಲ್ಲ ಅಂತ ಸಿದ್ದರಾಮಯ್ಯ ಹೇಳುತ್ತಿದ್ದರು. ಆದರೆ, ಅವರೇ ಹೆಚ್ಡಿಕೆಯನ್ನು ಸಿಎಂ ಮಾಡಲು ಹೊರಟಿಲ್ಲವೇ ಎಂದರು ಮಂಜೇಗೌಡ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ