ಪುರಸಭೆ ಎದುರು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ!

gadag: pourakarmika Attempted to suicide in front of the municipality

17-05-2018

ಗದಗ: ಜಿಲ್ಲೆಯ ರೋಣ ಪುರಸಭೆ ವ್ಯಾಪ್ತಿಯಲ್ಲಿ ಕಳೆದ 9 ತಿಂಗಳುಗಳಿಂದ ಸಂಬಳ ಪಾವತಿ ಮಾಡದ ಹಿನ್ನೆಲೆ, ಪುರಸಭೆ ವಿರುದ್ಧ ಪೌರ ಕಾರ್ಮಿಕರು ಹಾಗೂ ದಿನಗೂಲಿ ನೌಕರರು ಪ್ರತಿಭಟಿಸಿದ್ದಾರೆ. ಅಧಿಕಾರಿಗಳ ಎದುರೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವೇತನ ಪಾವತಿಸುವಂತೆ ಆಗ್ರಹಿಸಿ ಈ ಹಿಂದೆ ನಡೆಸಿದ್ದ ಪ್ರತಿಭಟನೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಎದುರು ಪೌರಕಾರ್ಮಿಕ ದ್ಯಾಮಣ್ಣ ಕೊಪ್ಪದ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವೇತನ ನೀಡಿ ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ನೀಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.


ಸಂಬಂಧಿತ ಟ್ಯಾಗ್ಗಳು

purasabhe pourakarmika ಆತ್ಮಹತ್ಯೆ ಆಕ್ರೋಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ