ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ

Congress-JDS protest against BJP in vidhana soudha

17-05-2018

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದನ್ನು ವಿರೋಧಿಸಿ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರು, ಶಾಸಕರು ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.

ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಈಗಲ್‍ಟನ್ ರೆಸಾರ್ಟ್‍ನಿಂದ ಹೊರಟ ಕಾಂಗ್ರೆಸ್, ಜೆಡಿಎಸ್ ಶಾಸಕರು ವಿಧಾನಸೌಧ ವಿಕಾಸಸೌಧದ ಮಧ್ಯ ಭಾಗದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಮುಂಭಾಗ ಸೇರಿ ಪ್ರತಿಭಟನೆ ನಡೆಸಿ ಬಿಜೆಪಿ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಕೇಂದ್ರ ನಾಯಕರಾದ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಸಚಿವ ಈಶ್ವರ್ ಖಂಡ್ರೆ, ಎಂಎಲ್‍ಸಿ ಐವಾನ್ ಡಿಸೋಜಾ ಮತ್ತು ಶಾಸಕ ಜಮೀರ್ ಅಹಮದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಸಂಬಂಧಿತ ಟ್ಯಾಗ್ಗಳು

B.S.Yeddyurappa siddaramaiah ಎಂಎಲ್‍ಸಿ ಜಮೀರ್ ಅಹಮದ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ