ರಾಜಭವನ ಸುತ್ತಮುತ್ತ 2 ಗಂಟೆಗೂ ಹೆಚ್ಚುಕಾಲ ಟ್ರಾಫಿಕ್ ಜಾಮ್

More than 2 hours heavy traffic Jam near around Raj Bhavan

17-05-2018

ಬೆಂಗಳೂರು: ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸುವ ವೇಳೆ ಸುಮಾರು 2ಗಂಟೆಗಳ ರಾಜಭವನ ರಸ್ತೆಯಲ್ಲಿ ಸಾರ್ವಜನಿಕ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಇದರಿಂದಾಗಿ ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದರು.

ಬೆಳಿಗ್ಗೆ 8ರಿಂದ 10ರವರಗೆ ರಾಜಭವನ ರಸ್ತೆಯಲ್ಲಿ ಸಂಚಾರ ನಿಷೇಧಿಸಿದ್ದರಿಂದ ಆ ರಸ್ತೆಯಲ್ಲಿ ವಿವಿದೆಢೆ ತೆರಳಬೇಕಾಗಿದ್ದ ವಾಹನ ಸವಾರರು ಬದಲಿ ರಸ್ತೆಗಳಲ್ಲಿ ಹೋಗಿದ್ದರಿಂದ ಆ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ಬಹುಮತವಿಲ್ಲದ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದನ್ನು ವಿರೋಧಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ರಸ್ತೆಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದರಿಂದ ಸಾವಿರಾರು ಮಂದಿ ಪೊಲೀಸರನ್ನು ನಿಯೋಜಿಸಿ ರಾಜಭವನ ರಸ್ತೆಯಲ್ಲಿ ವಾಹನ ಸಂಚಾರ ನಿರ್ಭಂಧಿಸಲಾಗಿತ್ತು.

ಇದರಿಂದ ರಾಜಭವನ ಹಾಗೂ ವಿಧಾನಸೌಧದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿ ನಿಗಧಿತ ಸಮಯಕ್ಕೆ ಕಚೇರಿಗಳು ಇನ್ನಿತರ ಕೆಲಸ ಕಾರ್ಯಗಳಿಗೂ ಹೋಗಬೇಕಾದ ಸಾರ್ವಜನಿಕರು ಪರದಾಡುವಂತಾಗಿತ್ತು. ಪ್ರಮಾಣವಚನ ಕಾರ್ಯಕ್ರಮ ಮುಗಿದ 1 ಗಂಟೆಯ ನಂತರ ರಾಜಭವನ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ಸಂಚಾರ ಸುಗಮಗೊಂಡಿತು.

 

 


ಸಂಬಂಧಿತ ಟ್ಯಾಗ್ಗಳು

RajBhavan Trafic ಸಂಚಾರ ಸುಗಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ