‘ಹಿಂಬಾಗಿಲಿಂದ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಯತ್ನ'- ಶೋಭಾ17-05-2018

ಬೆಂಗಳೂರು: ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ‘ನಾವು ಸರ್ಕಾರ ರಚನೆ ಮಾಡುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. ಹಿಂಬಾಗಿಲಿನ ಮೂಲಕ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದರು. ಕೇವಲ 38 ಸ್ಥಾನಗಳನ್ನು ಗೆದ್ದ ಪಕ್ಷ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷ ಸ್ಥಾನದಲ್ಲಿ ಕೂರಬೇಕಾಗಿತ್ತು. ಆದರೆ ಜೆಡಿಎಸ್ ಗೆ ಅಧಿಕಾರ ನೀಡಲು ಪ್ರಯತ್ನಿಸುತ್ತಿರುವುದು ಸರಿಯಲ್ಲ ಎಂದರು. ನಮಗೆ ವಿಶ್ವಾಸವಿದೆ ನಾವು 120ಕ್ಕೂ ಹೆಚ್ಚು ಶಾಸಕರ ಬೆಂಬಲ ಪಡೆಯುತ್ತೇವೆ ಎಂದು ಹೇಳಿದರು.

 


ಸಂಬಂಧಿತ ಟ್ಯಾಗ್ಗಳು

shobha karndjaje press meet ವಿಶ್ವಾಸ ಶಾಸಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ