ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ

Raj Bhavan chalo from congress leaders today

18-05-2018

ಬೆಂಗಳೂರು: ಬಹುಮತ ಇಲ್ಲದಿದ್ದರೂ ಬಿಜೆಪಿ ಪಕ್ಷಕ್ಕೆ ಸರ್ಕಾರ ರಚನೆಗೆ ಅವಕಾಶ ನೀಡಿದ ರಾಜ್ಯಪಾಲರ ಕ್ರಮವನ್ನು ಕಾಂಗ್ರೆಸ್-ಜೆಡಿಎಸ್ ಖಂಡಿಸುತ್ತಿವೆ. ರಾಜ್ಯಪಾಲರ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕ ಗುಲಾಂನಬಿ ಆಜಾದ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಇತರೆ ಕಾಂಗ್ರೆಸ್ ನಾಯಕರು ರಾಜಭವನ ಚಲೋನಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ರಾಜ್ಯಪಾಲರನ್ನು ಭೇಟಿಯಾಗಲು ಸಿದ್ಧತೆ ನಡೆಸಿದ್ದಾರೆ. ಆದರೆ, ಭೇಟಿಗೆ ರಾಜ್ಯಪಾಲರು ಅನುಮತಿ ನಿರಾಕರಿಸುವ ಸಾಧ್ಯತೆಗಳಿವೆ  ಎಂದು ಹೇಳಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Raj Bhavan KPCC ಸಂಸದೀಯ ಬುಹುಮತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ