‘ಸುಪ್ರೀಂ ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ’18-05-2018

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಅತಂತ್ರ ಹಿನ್ನೆಲೆ, ಬಿಜೆಪಿ ಪಕ್ಷಕ್ಕೆ ಬಹುಮತ ಇಲ್ಲದಿದ್ದರೂ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಬಹುಮತ ಸಾಬೀತು ಪಡಿಸಲು 15 ದಿನಗಳ ಕಾಲಾವಕಾಶ ನೀಡಿದೆ. ಅದರಂತೆ ನಿನ್ನೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ, ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಇಂದು ವಿಚಾರಣೆ ನಡೆಯಲಿದ್ದು ಎಲ್ಲರ ಚಿತ್ತ ಸುಪ್ರೀಂ ನತ್ತ ನೆಟ್ಟಿದೆ.

ಈ ಕುರಿತು ಮಾತನಾಡಿದ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ, ‘ಸುಪ್ರೀಂ ಕೋರ್ಟ್ ನಲ್ಲಿ ನಡೆಯುವ ವಿಚಾರಣೆ ಕುರಿತಂತೆ ಎಲ್ಲರ ಗಮನವಿದೆ. ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಹೆಚ್ಚಿನ ಸ್ಥಾನ ಪಡೆದವರಿಗೆ ಅಧಿಕಾರ ಪಡೆಯಲು ಅವಕಾಶ ಮಾಡಿ ಕೊಡಬೇಕು. ಆದರೆ, ಕಾಂಗ್ರೆಸ್ ಜನಾದೇಶಕ್ಕೆ ತದ್ವಿರುದ್ಧವಾಗಿ ಹಿಂಬಾಗಿಲಿನ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ, ಹೀಗಾಗಿ ಕಾಂಗ್ರೆಸ್ ಮಾತಿಗೆ ಬೆಲೆ ಇಲ್ಲದಂತಾಗಿದೆ’ ಎಂದರು.

ಕುಮಾರ ಸ್ವಾಮಿ ಬಹುಮತ ಸಿಗದಿದ್ದರೆ ವಿರೋಧ ಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುತ್ತೇನೆ ಅಂದಿದ್ದರು. ಆದರೆ ಅವರೇ ಇದೀಗ ಮೈತ್ರಿಗೆ ಮುಂದಾಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ