‘ಸುಪ್ರೀಂ ಆದೇಶವನ್ನು ಸ್ವಾಗತಿಸುತ್ತೇವೆ’-ಶೋಭಾ18-05-2018

ಬೆಂಗಳೂರು: ರಾಜ್ಯ ಬಿಜೆಪಿಗೆ ನಾಳೆ ಸಂಜೆ ನಾಲ್ಕು ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನೆಲೆ ಪ್ರತಿಕ್ರಿಯಿಸಿದ ಸಂಸದೆ ಶೋಭಾ ಕರಂದ್ಲಾಜೆ, ನಾಳೆ 4 ಗಂಟೆಗೆ ಬಹುಮತ ಸಾಬೀತಿಗೆ ಸುಪ್ರೀಂ ಆದೇಶ ಕೊಟ್ಟಿದೆ. ಸುಪ್ರೀಂ ಆದೇಶವನ್ನು ಬಿಜೆಪಿ ಸ್ವಾಗತಿಸುತ್ತದೆ. ಬಿಜೆಪಿ ಶಾಸಕರು ನಾಳೆ ಬಿಎಸ್ ವೈ ನೇತೃತ್ವದಲ್ಲಿ ಬಹುಮತ ಸಾಬೀತು ಮಾಡುತ್ತೇವೆ ಎಂಬ ವಿಶ್ವಾಸ ನಮಗಿದೆ ಎಂದರು. ನಮ್ಮ ಜೊತೆ ಹಲವು ಶಾಸಕರು ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಒಪ್ಪದವರು ನಮ್ಮ ಜೊತೆ ಇದ್ದಾರೆ. ನಾಳೆ ವಿಧಾನಸೌಧದಲ್ಲಿ ಬಹುಮತ ಸಾಬೀತು ಪಡಿಸುತ್ತೇವೆ ಎಂದರು.


ಸಂಬಂಧಿತ ಟ್ಯಾಗ್ಗಳು

shobha karandlaje supreme court ವಿಧಾನಸಭೆ ಸಂಪರ್ಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ