'ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದ ಹಾಗೆ ಆಗಿದೆ’- ಜೋಶಿ18-05-2018

ಧಾರವಾಡ: ಸುಪ್ರೀಂ ಕೋರ್ಟ್ ಆದೇಶಕ್ಕೆ ನಾವು ಬದ್ಧ, ಬಹುಮತ ಸಾಬೀತು ಪಡಿಸಲಿದ್ದೇವೆ ಎಂದು ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುಪ್ರೀಂ ಆದೇಶ ಹೊರಬೀಳುತ್ತಿದ್ದಂತೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ನೀವು ಪ್ರಜಾಪ್ರಭುತ್ವವನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ, ಕಾನೂನು ಬಾಹಿರವಾಗಿ ಎಷ್ಟು ಸರ್ಕಾರಗಳನ್ನು ಕಿತ್ತೊಗೆದಿದ್ದೀರಿ ಹೇಳಿ? ನೀವು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತೀರಾ, ಇದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದ ಹಾಗೆ ಆಗಿದೆ ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ದಯನೀಯ ಸ್ಥಿತಿ ಬಗ್ಗೆ ಕರುಣೆ ಇದೆ. 38 ಸ್ಥಾನ ಇರೋ ಪಕ್ಷ ಜೆಡಿಎಸ್ ಮುಂದೆ ಮಂಡಿಯೂರಿ ಕೂತಿದ್ದಾರೆ. ನಾಳೆ ನಾವು ಬಹುಮತ ಸಾಬೀತು ಮಾಡೇ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಡಿಎನ್ಎನಲ್ಲೇ ಪ್ರಜಾಪ್ರಭುತ್ವಕ್ಕೆ ಮೋಸ ಮಾಡೋದು ಅಡಗಿದೆ. ಜೆಡಿಎಸ್ ನಿಂದ ಕ್ರಾಸ್ ವೋಟಿಂಗ್ ಮಾಡಿಸಿದ್ದೀರಾ? ಇವಾಗ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ. ಜನರ ತೀರ್ಪನ್ನು ಬುಡಮೇಲು ಮಾಡೋಕೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

pralhad joshi Rahul Gandhi ವಿಶ್ವಾಸ ಸರ್ಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ