‘ಜೆಡಿಎಸ್-ಕಾಂಗ್ರೆಸ್ ನಿಂದ ಪ್ರಜಾಪ್ರಭುತ್ವದ ಅಣಕ’- ಈಶ್ವರಪ್ಪ

K.S.Eshwarappa reaction on supreme court order

18-05-2018

ಶಿವಮೊಗ್ಗ: ರಾಜ್ಯ ಬಿಜೆಪಿಗೆ ನಾಳೆ ಬಹುಮತ ಸಾಬೀತು ಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ, ಶಿಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ನಾಳೆ ಸದನದಲ್ಲಿ ಸಿಎಂ ಯಡಿಯೂರಪ್ಪ ಬಹುಮತ ‌ಸಾಬೀತು ಮಾಡಲಿದ್ದಾರೆ. ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಈ ರೀತಿಯ ಪರಿಸ್ಥಿತಿ ಹಿಂದೆ ಬಂದಿರಲಿಲ್ಲ. 104 ಸ್ಥಾನ ಪಡೆದಿರುವ ಪಕ್ಷಕ್ಕೆ ಸಿಎಂ ಅಭ್ಯರ್ಥಿಯ ವಿರುದ್ಧವಾಗಿ ಜೆಡಿಎಸ್ ನ ಕುಮಾರ ಸ್ವಾಮಿಯವರನ್ನು ಸಿಎಂ ಮಾಡಲು ಕಾಂಗ್ರೆಸ್ ಬೆಂಬಲ ನೀಡುತ್ತಿರುವುದು ಪ್ರಜಾಪ್ರಭುತ್ವದ ಅಣಕ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧ ಜನ ತೀರ್ಪು ನೀಡಿದ್ದಾರೆ. ಇದರಿಂದ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕುಳಿತು ಕೊಳ್ಳಬೇಕಿತ್ತು. ಕಾಂಗ್ರೆಸ್ ನಾಟಕದ ಬಗ್ಗೆ ‌ಜನ ನೋಡುತ್ತಿದ್ದಾರೆ. ಕಾಂಗ್ರೆಸ್ ನ ಹತಾಶೆ ಶಾಸಕರು ಬಿಜೆಪಿಗೆ ಬೆಂಬಲ ನೀಡಲು ಮುಂದೆ ಬಂದಿದ್ದಾರೆ. ವಿರೋಧ ಪಕ್ಷಗಳು ಶಾಸಕರನ್ನು ಕುದುರೆಗೆ ಹೋಲಿಸುವುದು ಸರಿಯಲ್ಲ. ಯಾವ ಕುದುರೆ ವ್ಯಾಪಾರನೂ ನಡೆಸಿಲ್ಲ ಎಂದರು.


ಸಂಬಂಧಿತ ಟ್ಯಾಗ್ಗಳು

K.S.Eshwarappa governor ಕುದುರೆ ವ್ಯಾಪಾರ ಶಾಸಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ