ಮತ್ತೆ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

Heavy Rain may at karnataka!

18-05-2018

ಬೆಂಗಳೂರು: ಸಾಗರ ಚಂಡ ಮಾರುತದ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 4ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲ ಭಾಗದಲ್ಲಿ  ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದ ನೈರುತ್ಯ ಭಾಗದಲ್ಲಿ ಗಲ್ಫ್ ಆಫ್ ಏಡನ್‍ನಲ್ಲಿ (ಆಫ್ರಿಕಾ ದೇಶದ ಸೋಮಾಲಿಯಾ ಸಮೀಪವಿರುವ ಸಮುದ್ರ) ನಿರ್ಮಾಣವಾಗಿರುವ ಸಾಗರ ಚಂಡ ಮಾರುತದ ಪ್ರಭಾವದಿಂದಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆ ಹಾಗೂ ಮಲೆನಾಡಿನ ಕೆಲವೆಡೆ ಮೇ 22ರವರೆಗೂ ಮಳೆಯಾಗಲಿದ್ದು ಇದಕ್ಕೂ ಮುಂಗಾರು ಮಳೆಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು-ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಕೆಲ ಪ್ರದೇಶಗಳಲ್ಲಷ್ಟೇ ತುಂತುರು ಮಳೆ ಮುನ್ಸೂಚನೆಯಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.


ಸಂಬಂಧಿತ ಟ್ಯಾಗ್ಗಳು

Heavy Rain Ocean ನೈರುತ್ಯ ಗಲ್ಫ್ ಆಫ್ ಏಡನ್‍


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ