ಬಹುಮತ ಸಾಬೀತು ಮಾಡಲು ನಾವು ಸಿದ್ಧ-ಬಿಎಸ್ವೈ

We are ready to prove majority -BSY

18-05-2018

ಬೆಂಗಳೂರು: ಬಹುಮತ ಸಾಬೀತು ಮಾಡಲು ನಾವು ಸಿದ್ಧ. ಸುಪ್ರೀಂ ತೀರ್ಪಿಗೆ ತಲೆಬಾಗುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ಪ್ರಕಟವಾದ ನಂತರ ತುರ್ತು ಸಂಪುಟ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂ ಕೋರ್ಟ್ ಸೂಚನೆಯಂತೆ ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಲದ ಅಧಿವೇಶನ ಕರೆಯಲು ಕೋರಿ ರಾಜ್ಯಪಾಲರಿಗೆ ಪತ್ರ ಕಳುಹಿಸುವುದಾಗಿ ತಿಳಿಸಿದರು.

ವಿಧಾನಸಭೆಯಲ್ಲಿ ತಾವು ನಾಳೆ ಬಹುಮತ ಸಾಬೀತುಪಡಿಸುವ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ ಹೊಂದಿರುವುದಾಗಿ ಅವರು ಪುನರುಚ್ಚರಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಸುದ್ದಿಗಾರರೊಂದಿಗೆ ಮಾತನಾಡಿ, ಸದನದಲ್ಲಿ ನಾಳೆ ಬಹುಮತ ಸಾಬೀತುಪಡಿಸಲು ಬಿಜೆಪಿ ಸನ್ನದ್ಧವಾಗಿದೆ. ನಮ್ಮ ಬಳಿ 120 ಶಾಸಕರಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

yeddyurappa Majority ವಿಧಾನಮಂಡಲ ರಾಜ್ಯಪಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ