ಕೆ.ಜಿ.ಬೋಪಯ್ಯ ಹಂಗಾಮಿ ಸ್ಪೀಕರ್

BJP MLA KG Bopaiah Sworn In As Karnataka Assembly Pro Tem Speaker

18-05-2018

ಬೆಂಗಳೂರು: ನಿರೀಕ್ಷೆಯಂತೆ ಹಿರಿಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕಮಾಡಲಾಗಿದೆ. ಬೋಪಯ್ಯ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ. ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಹಾಗೂ ಅವಿಶ್ವಾಸ ನಿರ್ಣಯದ ಕುರಿತು ಪೂರ್ಣ ಪ್ರಕ್ರಿಯೆಯನ್ನು ನಿರ್ವಹಣೆಯನ್ನು ಮಾಡಲಿದ್ದಾರೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸಚಿವಾಲಯದ ಪಟ್ಟಿಯಲ್ಲಿ ಬಂದ ಹೆಸರುಗಳಲ್ಲಿ ಬೋಪಯ್ಯ ಅವರನ್ನು ಆಯ್ಕೆಮಾಡಲಾಗಿದೆ. ಈ ಹಿಂದೆ 2018ರಲ್ಲೂ ಕೂಡ ಬೋಪಯ್ಯ ವಿಧಾನಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಸತತ 5 ಬಾರಿ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. ಪ್ರಸ್ತುತ 2018ರಲ್ಲೂ ಶಾಸಕರಾಗಿ ಪುನರಾಯ್ಕೆಗೊಂಡಿದ್ದಾರೆ.

 

 

 


ಸಂಬಂಧಿತ ಟ್ಯಾಗ್ಗಳು

K.G.Bopaiah pro term speaker ವಿರಾಜಪೇಟೆ ನಿರ್ಣಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ