ದೇವರ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

special pooja in from BJP workers in karnataka

19-05-2018

ತುಮಕೂರು: ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಹಿನ್ನೆಲೆ, ಯಡಿಯೂರಪ್ಪ ಸಿಎಂ ಸ್ಥಾನ ಉಳಿಯಲೆಂದು ಬಿಜೆಪಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ. ತುಮಕೂರಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೂರಾರು ಅಭಿಮಾನಿಗಳು, ಕಾರ್ಯಕರ್ತರು ವಿವಿಧ ಪೂಜೆ ಪುನಸ್ಕಾರಗಳನ್ನು ಮಾಡುತ್ತಿದ್ದಾರೆ.

ಬಹುಮತ ಸಾಬೀತು ನಿರ್ವಿಘ್ನವಾಗಿ ನೆರವೇರಲೆಂದು ಮಂಡ್ಯದಲ್ಲಿಯೂ, ಕಾಳಿಕಾಂಬ ದೇವಿಗೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ನೆರವೇರಿಸಿದ್ದಾರೆ.

ಬಿಜೆಪಿ ಬಹುಮತ ಸಾಧಿಸಲೆಂದು ಮೈಸೂರಿನ ಬಿಜೆಪಿ ಕಾರ್ಯಕರ್ತರು ಹರಕೆ ಹೊತ್ತಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ನಿರ್ವಿಘ್ನವಾಗಿ ಯಾವುದೇ ಅಡೆತಡೆಗಳಿಲ್ಲದೆ ಸಾಬೀತು ಪಡಿಸಲೆಂದು ಚಾಮುಂಡಿ ಬೆಟ್ಟದ ಸಾವಿರ ಮೆಟ್ಟಿಲುಗಳನ್ನು ಹತ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

yeddyurappa siddalingeshwara ವಿಧಾನಸಭೆ ಅಡೆತಡೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ