ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಹೆಚ್ಡಿಕೆ ಕಿವಿಮಾತು

congress-JDS plans for today!

19-05-2018

ಬೆಂಗಳೂರು: ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ತುರ್ತು ಅಧಿವೇಶನದಲ್ಲಿ ಕಾಂಗ್ರೆಸ್-ಜೆಡಿಎಸ್ ಮಾಸ್ಟರ್ ಪ್ಲಾನ್ಮಾ ಸಿದ್ಧಪಡಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯಾವುದೇ ಕಾರಣಕ್ಕೂ ಸದನದಲ್ಲಿ ಪ್ರತಿಭಟನೆ ಮಾಡದಿರಲು ಎರಡೂ ಪಕ್ಷಗಳು ನಿರ್ಧರಿಸಿವೆ ಎಂದು ತಿಳಿದು ಬಂದಿದೆ.

ಪ್ರತಿಭಟನೆ, ಗದ್ದಲ ಮಾಡುವ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಹೊರ ಹಾಕಿ ವಿಶ್ವಾಸ ಸಾಬೀತು ಪಡಿಸಲು ಬಿಜೆಪಿ ‌ಪ್ಲಾನ್ ಹೂಡಿದೆ ಎನ್ನಲಾಗಿದ್ದು, ಇದಕ್ಕೆ ತಕ್ಕ ಉತ್ತರ ಕೊಡಲು ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ರಣತಂತ್ರ ರೂಪಿಸಿದ್ದಾರೆ. ಬಹುಮತ ಸಾಬೀತು ಪ್ರಕ್ರಿಯೆ ಮುಗಿಯುವವರೆಗೂ ಸಮಾಧಾನ ಕಾಯ್ದುಕೊಳ್ಳಲು ತೀರ್ಮಾನ ತೆಗೆದುಕೊಂಡಿದ್ದಾರೆ.

ಖಾಸಗಿ ಹೊಟೇಲ್ ನಲ್ಲಿ ಶಾಸಕರೊಂದಿಗೆ ಚರ್ಚಿಸಿದ ಕುಮಾರಸ್ವಾಮಿ ಸದನದಲ್ಲಿ ಯಾವ ರೀತಿಯಾಗಿ ವರ್ತಿಸಬೇಕೆಂದು ತಿಳಿಹೇಳಿದ್ದಾರೆ. ಯಾವುದೇ ಕಾರಣಕ್ಕೂ ಗದ್ದಲ ಎಬ್ಬಿಸದಂತೆ ಶಾಸಕರಲ್ಲಿ ಮನವಿ ಮಾಡಿದ್ದಾರೆ. ಇದೇ ವೇಳೆ ಪ್ರತಿಭಟನೆಯೂ ಮಾಡದಂತೆ ಸೂಚಿಸಿದ್ದಾರೆ. ಗದ್ದಲ ಎಬ್ಬಿಸಿದಲ್ಲಿ ಅಂತಹ ಶಾಸಕರನ್ನು ಸದನದಿಂದ ಹೊರಹಾಕಿ ಬಹುಮತ ಸಾಬೀತುಪಡಿಸುವ ಸಾಧ್ಯತೆ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಒಟ್ಟಾಗಿದ್ದೇವೆ, ಬಿಜೆಪಿಯವರದ್ದು ಆಶಾವಾದಿ ರಾಜಕಾರಣ. ಅವರು ಈಗಲೂ ಬಹುಮತ ಸಾಬೀತು ಕನಸು ಕಾಣುತ್ತಿದ್ದಾರೆ. ಅವರ ಭರವಸೆ ನಾಲ್ಕು ಗಂಟೆಗೆ ಠುಸ್ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಲಿದೆ ಎಂದು ಹೆಚ್.ಡಿ ಕುಮಾರ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy Vidhana Soudha ಪ್ರತಿಭಟನೆ ಅಧಿವೇಶನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ