ಶ್ರೀರಾಮುಲುಗೆ ಹೆಚ್ಡಿಕೆ ತಿರುಗೇಟು

Shriramulu v/s H.D.Kumaraswamy

21-05-2018

ಹಾಸನ: ದೇವರ ಅನುಗ್ರಹ, ಹೆತ್ತವರ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ ಎಂದು ನಿಯೋಜಿತ ಮುಖ್ಯ ಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಹೊಳೆ ನರಸೀಪುರದಲ್ಲಿ ಮಾತನಾಡಿದ ಅವರು, ‘ನಾನು ಹುಟ್ಟಿ ಬೆಳೆದ ಹರದನಹಳ್ಳಿ ಲಕ್ಷ್ಮಿ ನರಸಿಂಹ ಸ್ವಾಮಿ, ಶಿವನ ಆಶೀರ್ವಾದ ಪಡೆಯಲು ಬಂದಿದ್ದೇನೆ’ ಎಂದರು. ಮಧ್ಯಾಹ್ನ ದೆಹಲಿಗೆ ಹೋಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಯಾವತಿ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.

'ನನಗೆ ಬೆಂಬಲ ನೀಡಿರುವ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ಮಾಡುವೆ, 5 ವರ್ಷ ಸುಭದ್ರ ಆಡಳಿತ ನೀಡಲು ಸಂಕಲ್ಪ ಮಾಡಿದ್ದೇನೆ, ಇದಕ್ಕೆ ಎಲ್ಲರ ಸಹಕಾರ ಬೇಕಿದೆ. ಈ ಬಾರಿ ಸಿಎಂ ಹುದ್ದೆ ನಿಭಾಯಿಸುವುದು ದೊಡ್ಡ ಸವಾಲು ಎಂಬುದು ನನಗೆ ಗೊತ್ತಿದೆ. ಎಲ್ಲರ ಅಭಿಪ್ರಾಯಗಳನ್ನು ನಾನು ಗಮನಿಸುತ್ತಿದ್ದೇನೆ. ಯಾರೂ ನನ್ನನ್ನು ನಿದ್ದೆಗೆಡಿಸಲು ಆಗಲ್ಲ' ಎಂದು ಶ್ರೀರಾಮುಲುಗೆ ತಿರುಗೇಟು ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy Delhi ಬೆಂಬಲ ಅಭಿಪ್ರಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ