‘ಕೋಮುವಾದಿ ಪಕ್ಷವನ್ನು ದೂರವಿಡಲು ಮೈತ್ರಿ ಮಾಡಿಕೊಳ್ಳಲಾಗಿದೆ’-ಪರಂ

Rajiv Gandhi Death Anniversary At KPCC Office |

21-05-2018

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್‍ ಗಾಂಧಿ ಅವರ 27ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಾಡಾಗಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಮಾತನಾಡಿ, ದೇಶಕ್ಕೆ ರಾಜೀವ್ ಗಾಂಧಿ ನೀಡಿರುವ ಕೊಡುಗೆಯನ್ನು ಸ್ಮರಿಸಿದರು.

ಡಾ. ಜಿ. ಪರಮೇಶ್ವರ್ ಮಾತನಾಡಿ, ಕೋಮುವಾದಿ ಪಕ್ಷವನ್ನು ದೂರ ಇರಿಸುವ ನಿಟ್ಟಿನಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲಾಗಿದೆ. ಈ ತೀರ್ಮಾನ ಮುಂದಿನ ದಿನಗಳಲ್ಲಿ  ನಮಗೆ ಕಷ್ಟವಾಗಬಹುದು. ಎಲ್ಲದರ ಬಗ್ಗೆ ನಮಗೆ ಸ್ಪಷ್ಟ ಕಲ್ಪನೆ ಇದೆ ಎಂದು ಹೇಳಿದರು.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಕರ್ನಾಟಕದ ಜನರಿಗೆ ಬೇಡವಾಗಿತ್ತು. ರಾಜ್ಯದ ಮತದಾರ ಅದಕ್ಕೆಂದೇ ಪೂರ್ಣ ಪ್ರಮಾಣದ ಬಹುಮತ ನೀಡಿಲ್ಲ. ನಮಗೂ ಸಹ ನೀಡಿಲ್ಲ ಆದರೆ ಜನರ ತೀರ್ಪಿಗೆ ನಾವು ತಲೆಬಾಗಿ ಒಪ್ಪಿಕೊಂಡಿದ್ದೇವೆ. ಆದರೆ ಬಿಜೆಪಿಯವರು ಜನರ ತೀರ್ಪನ್ನೇ ಸವಾಲಾಗಿ ಸ್ವೀಕರಿಸಿ ರಾಜ್ಯವನ್ನಾಳಲು ಹೊರಟಿದ್ದರು ಎಂದು ಟೀಕಿಸಿದರು.

ಮುಂದಿನ ವರ್ಷ ಲೋಕಸಭೆ ಚುನಾವಣೆ ಚುನಾವಣೆ ನಡೆಯಲಿದ್ದು ನಾವು ಸಮರ್ಥವಾಗಿ ಬಿಜೆಪಿಯನ್ನು ಎದುರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಆಗಲೇ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೆ ನಮ್ಮ ಪಕ್ಷ ಹಿಮ್ಮೆಟ್ಟುವುದಿಲ್ಲ. ಈಗಾಗಲೇ ದೇಶದಲ್ಲಿ ಮೋದಿ ಅಲೆ ಕ್ಷೀಣಿಸುತ್ತ ಬಂದಿದೆ. ಇದಕ್ಕೆ ಕರ್ನಾಟಕದ ವಿಧಾನಸಭೆ ಚುನಾವಣೆಯೇ ಸಾಕ್ಷಿ. ನಮ್ಮ ಪಕ್ಷ ಸೋತಿರಬಹುದು. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್‍ಗೆ ತೀರ ಹಿನ್ನೆಡೆಯಾಗಿದೆ ಎಂದು ಅಲ್ಲ. ಮುಂದಿನ ದಿನಗಳಲ್ಲಿ ನಮ್ಮ ಪಕ್ಷ ಬಲಗೊಳ್ಳುತ್ತದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಿದ್ಧವಾಗಿರೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ