ಗೃಹರಕ್ಷಕ ಪತಿ-ಪತ್ನಿಯ ಗಲಾಟೆ ಕಹಾನಿ

Illegal relationship husband assaulted his wife!

22-05-2018

ಬೆಂಗಳೂರು: ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಪತ್ನಿಯನ್ನು ಪತಿ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪೊಲೀಸರ ಅತಿಥಿಯಾಗಿದ್ದಾನೆ. ಘಟನೆ ನಗರರದ ವೆಸ್ಟ್ ಆಫ್‍ಕಾರ್ಡ್ ರಸ್ತೆಯ ಇಸ್ಕಾನ್ ದೇವಾಲಯದ ಬಳಿ ನಡೆದಿದೆ.

ಹಲ್ಲೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡಿರುವ ಗೃಹರಕ್ಷಕ ಸಿಬ್ಬಂದಿ ಲತಾ(35) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭಿರವಾಗಿದೆ. ಕೃತ್ಯವೆಸಗಿದ ಪತಿ ಕೃಷ್ಣ (41)ನನ್ನು ಸುಬ್ರಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಪತಿ ಪತ್ನಿ ಇಬ್ಬರು ಗೃಹರಕ್ಷಕ ಸಿಬ್ಬಂದಿಯಾಗಿದ್ದರು.

ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಲತಾ ಹಾಗೂ ನಗರದ ವಿವಿದೆಢೆ ನಿಯೋಜನೆಗೊಳ್ಳುತ್ತಿದ್ದ ಗೃಹರಕ್ಷಕ ಸಿಬ್ಬಂದಿ ಕೃಷ್ಣ 15 ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇದ್ದ ಇಬ್ಬರು ಮಕ್ಕಳಲ್ಲಿ ಮಗಳು ಅಕಾಲಿಕ ಮರಣ ಹೊಂದಿದ್ದಳು.

ತನ್ನ ತಾಯಿಯ ಮನೆಯ ಬಳಿಯೇ ಬಾಡಿಗೆ ಮನೆ ಮಾಡಿಕೊಂಡಿದ್ದ ಲತಾ ಪತಿ ಕೃಷ್ಣ ಹಾಗೂ ಮಗನೊಂದಿಗೆ ವಾಸವಾಗಿದ್ದರು, ಲತಾ ಬೇರೊಬ್ಬನ ಜೊತೆ ಅನೈತಿಕ ಸಂಬಂದ ಹೊಂದಿರುವ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆದು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತಿದ್ದರು.

ಪೊಲೀಸರು ಇಬ್ಬರಿಗೂ ಬೈದು ಬುದ್ದಿ ಹೇಳಿ ಕಳುಹಿಸಿದ್ದರೂ ಇಬ್ಬರ ಜಗಳ ಕಡಿಮೆಯಾಗಿರಲಿಲ್ಲ. ಆದರೆ, ಇಂದು ಬೆಳಿಗ್ಗೆ 7ರ ವೇಳೆ ಇದೇ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಆಕ್ರೋಶಗೊಂಡ ಕೃಷ್ಣ ಪತ್ನಿಯ ಮೇಲೆ ಮಚ್ಚಿನಿಂದ ತಲೆ ಇನ್ನಿತರ ಭಾಗಗಳಿಗೆ ಹಲ್ಲೆ ನಡೆಸಿದ್ದಾನೆ.

ಗಂಭೀರವಾಗಿ ಗಾಯುಗೊಂಡ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸುಬ್ರಮಣ್ಯನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ  ಎಂದು ಡಿಸಿಪಿ ಚೇತನ್ ಸಿಂಗ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder wife ಇಸ್ಕಾನ್ ಅತಿಥಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ