ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ದುರ್ಮರಣ

Two separate accident: two dead

22-05-2018

ಬೆಂಗಳೂರು: ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಯಲಹಂಕದ ಅಲ್ಲಾಳ ಸಂದ್ರದ ಬಳಿ ನಡೆದಿದೆ.

ಯಲಹಂಕದ ಕೊಂಡಪ್ಪ ಲೇಔಟ್‍ನ ಮುನಿರಾಜು(46)ಮೃತಪಟ್ಟವರು. ರಾತ್ರಿ 11.15ರ ವೇಳೆ ಮನೆಗೆ ಹೊಂಡಾ ಆಕ್ಟೀವಾ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮುನಿರಾಜ್ ಅವರು ಮಾರ್ಗ ಮಧ್ಯೆ ಅಲ್ಲಾಳಸಂದ್ರದ ರೈಲ್ವೆ ಸೇತುವೆ ಬಳಿ ಸ್ಕೂಟರ್ ನಲ್ಲಿ ಯೂ ತಿರುವು ತೆಗೆದುಕೊಳ್ಳಲು ಹೋದಾಗ ಲಾರಿ ಡಿಕ್ಕಿ ಹೊಡೆದಿದೆ.

ಕೆಳಗೆ ಬಿದ್ದ ಮುನಿರಾಜು ಅವರ ತಲೆಯ ಮೇಲೆ ಚಕ್ರ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಪರಾರಿಯಾಗಿರುವ ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಮತ್ತೊಂದೆಡೆ ಹೊಸೂರು ಮುಖ್ಯರಸ್ತೆಯ ಹಳೆ ಚಂದಾಪುರದ ಬಳಿ ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಹೊಸೂರು ಬಳಿಯ ನಲ್ಲೂರಿನ ಮಾಧೇಶ್ವರನ್(45)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಕೆಲಸ ಹುಡುಕಿಕೊಂಡು ನಗರಕ್ಕೆ ಟಿವಿಎಸ್ ವಿಕ್ಟರ್ ಬೈಕ್‍ನಲ್ಲಿ ಬರುತ್ತಿದ್ದ ಅವರು ಹಳೆ ಚಂದಾಪುರದ ಆರ್.ಕೆ ಬಾರ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕ್ಯಾಂಟರ್ ನಿಲ್ಲಿಸಲು ಸ್ಥಳಾವಕಾಶ ಇಲ್ಲದಿದ್ದರೂ ಚಾಲಕ ನಿಲ್ಲಿಸಿ ಮದ್ಯಪಾನ ಮಾಡಲು ಬಾರ್ಗೆ ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

canter accident ಲೇಔಟ್‍ ಸ್ಕೂಟರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ